ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ Siddaramaiah ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಯೋಜನೆಗಳಿಗೆ ದೊರೆತ ಅನುದಾನ ಮತ್ತು ಇಲಾಖೆ ಕುರಿತು ತೆಗೆದುಕೊಂಡ ಪ್ರಮುಖ ನಿರ್ಣಯಗಳು ಇಲ್ಲಿವೆ..
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಹಾಗೂ ನಿರ್ವಹಣೆಗಾಗಿ ಗೃಹ ಆರೋಗ್ಯ ಯೋಜನೆ ಜಾರಿಗೊಳಿಸಿ, ಅಗತ್ಯವಿರುವ ತಪಾಸಣಾ ಉಪಕರಣಗಳು ಹಾಗೂ ಔಷಧಿಗಳನ್ನು ಖರೀದಿಸಲು ಒಟ್ಟು 185.74 ಕೋಟಿ ರೂಪಾಯಿ ಅನುದಾನ.
ಶ್ರವಣ ಸಂಜೀವಿನಿ ಯೋಜನೆ ಅನುಷ್ಠಾನಕ್ಕೆ ಒಟ್ಟು 12 ಕೋಟಿ ರೂಪಾಯಿ ಅನುದಾನ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೌಕರರ ಹಾಜರಾತಿ ಗುರುತಿಸಲು "ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆ" ಅನುಷ್ಠಾನಕ್ಕೆ ಅನುಮೋದನೆ.
108 ಆರೋಗ್ಯ ಕವಚ ಸೇವೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಿರ್ವಹಿಸಲು ರಾಜ್ಯ ಮಟ್ಟದಲ್ಲಿ ಕಮಾಂಡ್ ಅಂಡ್ ಕಂಟ್ರೋಲ್ ಸೆಂಟರ್ ಸ್ಥಾಪಿಸಲು ಹಾಗೂ ಜಿಲ್ಲಾಡಳಿತದ ಮುಖಾಂತರ ಆಂಬ್ಯುಲೆನ್ಸ್‌ಗಳ ನಿರ್ವಹಣೆಗೆ ಅನುಮೋದನೆ....

Post a Comment