ARAMBH SUDDI UPDATE

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮ್ಮೇಳನ‌ಸಭಾಂಗಣದಲ್ಲಿ ನಡೆಸಿದ ಸುದ್ದಿಗೋಷ್ಠಿಯ ಮುಖ್ಯಾಂಶಗಳು     

 Bengaluru RCB ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದು:ಖಕರವಾಗಿದ್ದು, ಮೃತಪಟ್ಟವರಿಗೆ ಸಂತಾಪ ಕೋರಲಾಯಿತು. ಇಂದು ಎಂದಿನಂತೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ನಿನ್ನೆ ನಡೆದ ಅಹಿತಕರ ಘಟನೆ ಬಗ್ಗೆ ಚರ್ಚಿಸಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.
  ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ಜಸ್ಟೀಸ್ ಮೈಕೆಲ್ ಕುನ್ಹಾ  ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ.
ಆರ್ ಸಿ ಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್ ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ  ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿದೆ. ಇವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
  ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸಪೆಕ್ಞರ್ ಸೇರಿದಂತೆ  ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ , ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ರನ್ನು ತಕ್ಷಣದಿಂದ ಅಮಾನತ್ತು ಗೊಳಿಸಲು ತೀರ್ಮಾನಿಸಲಾಗಿದೆ. ಈ ದುರಂತಕ್ಕೆ ಸಂಬಂಧಪಟ್ಟ ಚರ್ಚೆಯ ನಂತರ ತೆಗೆದುಕೊಂಡ ತೀರ್ಮಾನಗಳಾಗಿವೆ. ಉಪಮುಖ್ಯಮಂತ್ರಿಗಳು, ಗೃಹಸಚಿವರು, ಸಚಿವರಾದ ಎಚ್.ಕೆ.ಪಾಟೀಲ್, ಸುಧಾಕರ್ , ಮಹಾದೇವಪ್ಪ ಸೇರಿದಂತೆ  ಅಧಿಕಾರಿಗಳು ಚರ್ಚೆಯಲ್ಲಿ ಭಾಗವಹಿಸಿದ್ದರು.
 ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡುಬರುತ್ತಿದ್ದು, ಇವರುಗಳನ್ನು ಅಮಾನತ್ತುಗೊಳಿಸಲು    ತೀರ್ಮಾನಿಸಲಾಗಿದೆ.
 ನಾನು ಶಾಸಕರು, ಸಚಿವ, ಡಿಸಿಎಂ ಹಾಗೂ ಮುಖ್ಯಮಂತ್ರಿಯಾದ ನಂತರ ಇಂತಹ ಘಟನೆ ನಡೆದಿರಲಿಲ್ಲ. ಈ ಘಟನೆ ನಮ್ಮನ್ನು ಘಾಸಿಗೊಳಿಸಿದೆ.
   ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬದವರ ಜೊತೆ ಸರ್ಕಾರವಿದೆ
ನಿನ್ನೆ ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಮೂರು ಸಂಸ್ಥೆಗಳು ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.
Author

Arambh Suddi Kannada News True Newses And Stories Telecasting

Experienced journalist focused on global news, trends, and untold stories — with a commitment to accuracy and impact.

0/Post a Comment/Comments