ಸಚಿವ ರಹೀಂ ಖಾನ್ ಬಿ,ಎಸ್,ಎಸ್.ಕೆ ಸಕ್ಕರೆ ಕಾರ್ಖಾನೆಯಲ್ಲಿ ಅವ್ಯವಹಾರ ಮಾಡಿದವರ ವಿರುದ್ಧ ಕ್ರಮ!!!! ಆರಂಭ್ ಸುದ್ದಿ ಕನ್ನಡ!!! 26/06/25..
ಸಚಿವ ರಹೀಂ ಖಾನ್ ಬಿ,ಎಸ್,ಎಸ್.ಕೆ ಸಕ್ಕರೆ ಕಾರ್ಖಾನೆಯಲ್ಲಿ ಅವ್ಯವಹಾರ ಮಾಡಿದವರ ವಿರುದ್ಧ ಕ್ರಮ ಆಗದಿದ್ದರೆ ಮತ್ತೆ ಅವರೇ ಚುನಾಯಿಸಿ ಬಂದು ಕಾರ್ಖಾನೆಯನ್ನು ನಾಶ ಮಾಡುತ್ತಾರೆ. ಈ ಬಗ್ಗೆ ತನಿಖೆ ಆಗಿ ತಪ್ಪಿತಸ್ಥರ ವಿರುದ್ಧ ಕಾನೂನು ರೀತ್ಯ ಕ್ರಮ ಆಗಬೇಕು ಎಂದರು.ಕಾರ್ಖಾನೆಯ ಸ್ವಾಧೀನದಲ್ಲಿರುವ 173 ಎಕರೆ ಜಮೀನಿನ ಪೈಕಿ ಕಾರ್ಖಾನೆಗೆ ಬೇಕಾದಷ್ಟು ಜಾಗ ಇಟ್ಟುಕೊಂಡು ಭಾಗಶಃ ಮಾರಾಟ ಮಾಡಿ, ಬ್ಯಾಂಕ್ ಗಳ ಸಾಲ ತೀರಿಸಿ, ಯಂತ್ರೋಪಕರಣಗಳಿಗೆ ಹೊಸ ಸಾಲ ಪಡೆದು ಕಾರ್ಖಾನೆ ಆರಂಭಿಸಲು ಸಾಧ್ಯವೇ ಎಂಬ ಬಗ್ಗೆ ಪರಿಶೀಲಿಸಲು ಸಹಕಾರ ಸಚಿವ ರಾಜಣ್ಣ ಸಲಹೆ ನೀಡಿದರು.
ಸಕ್ಕರೆ ಸಚಿವ ಶಿವಾನಂದ ಪಾಟೀಲ್, ಓಟಿಎಸ್ ಯೋಜನೆಯಡಿ ಬ್ಯಾಂಕ್ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವ ಮತ್ತು ಖಾಸಗಿಯವರಿಗೆ ಗುತ್ತಿಗೆ ನೀಡಿ ಸಕ್ಕರೆ ಕಾರ್ಖಾನೆ ಪುನಾರಂಭ ಮಾಡುವ ಬಗ್ಗೆ ಪರಿಶೀಲಿಸುವಂತೆ ಸಲಹೆ ನೀಡಿದರು.
ಬೀದರ್ ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಸಹಕಾರಿ ಸಕ್ಕರೆ ಕಾರ್ಖಾನೆ ಪುನಾರಂಭಕ್ಕಾಗಿ ಮುಖ್ಯಮಂತ್ರಿಗಳ ಬಳಿಗೆ ನಿಯೋಗ ತೆರಳಲು ಮತ್ತು ಕಾರ್ಖಾನೆಯ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಬೇಕೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಚಿವರುಗಳಾದ ಕೆ.ಎನ್. ರಾಜಣ್ಣ, ಶಿವಾನಂದ ಪಾಟೀಲ್, ಈಶ್ವರ ಬಿ ಖಂಡ್ರೆ, ರಹೀಂಖಾನ್ ಮತ್ತು ಮಾಜಿ ಸಚಿವ ರಾಜಶೇಖರ ಪಾಟೀಲ್, ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ, ವಿಧಾನಪರಿಷತ್ ಸದಸ್ಯರಾದ ಭೀಮರಾವ್ ಪಾಟೀಲ್, ಚಂದ್ರಶೇಖರ ಪಾಟೀಲ್, ಎಂ.ಜಿ. ಮುಳೆ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಮರ್ ಬಿ ಖಂಡ್ರೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮತ್ತಿತರರು ಪಾಲ್ಗೊಂಡಿದ್ದರು.

Post a Comment