ಆರಂಭ್ ಸುದ್ದಿ ಕನ್ನಡ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.60ಕ್ಕಿಂತ ಕಡಿಮೆ ಉತ್ತೀರ್ಣತೆ ಫಲಿತಾಂಶ ಪಡೆದಿರುವ ಶಾಲೆಗಳ  ವಿರುದ್ಧ ಶಾಲಾ ಶಿಕ್ಷಣ ಇಲಾಖೆ ನೋಟಿಸ್ ಜಾರಿಗೊಳಿಸಿದೆ!!!" 
ಪರೀಕ್ಷೆಯಲ್ಲಿ ಶೇ.60ಕ್ಕಿಂತ ಕಡಿಮೆ ಉತ್ತೀರ್ಣತೆ ಫಲಿತಾಂಶ ಪಡೆದಿರುವ ಶಾಲೆಗಳ ಮುಖ್ಯಸ್ಥರ ವಿರುದ್ಧ ಶಾಲಾ ಶಿಕ್ಷಣ ಇಲಾಖೆ ನೋಟಿಸ್ ಜಾರಿಗೊಳಿಸಿದೆ. ಜತೆಗೆ ಫಲಿತಾಂಶ ಕಡಿಮೆ ಬಂದಿರುವ ಅನುದಾನಿತ ಶಾಲೆಗಳ ಶಿಕ್ಷಕರ ವೇತನಕ್ಕೆ ಕತ್ತರಿ ಹಾಕಲು ಮುಂದಾಗಿದೆ.

ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟ ಗೊಂಡಿದೆ. ರಾಜ್ಯದಲ್ಲಿ ಹಲವಾರು ಶಾಲೆಗಳು ಶೇ.60 ಕ್ಕಿಂತ ಕಡಿಮೆ ಉತ್ತೀರ್ಣ ಫಲಿತಾಂಶ ಪಡೆದಿರುವ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಗುಣ ಮಟ್ಟ ಸುದಾರಣೆ, ಕಲಿಕೆಯ ಮಟ್ಟ ಉನ್ನತಗೊಳಿಸುವ ಕ್ರಮಗಳೊಂದಿಗೆ ಫಲಿತಾಂಶವನ್ನು ಉತ್ತಮಗೊಳಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಮರ್ಪಕವಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿಲ್ಲದಿರುವುದು ಕಂಡುಬಂದಿದೆ ಎಂದು ತಿಳಿಸಿದೆ.

ಶಾಲಾ ಮುಖ್ಯ ಶಿಕ್ಷಕರ ಈ ಧೋರಣೆಯು ಕರ್ತವ್ಯದಲ್ಲಿ ನಿರ್ಲಕ್ಷತೆ ಮತ್ತು ಕರ್ತವ್ಯ ಲೋಪವನ್ನು ತೋರಿಸುತ್ತಿದ್ದು, ಶೈಕ್ಷಣಿಕವಾಗಿ ಶಾಲೆಯ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಉತ್ತಮ ಪಡಿಸು ವಲ್ಲಿ ಸರಿಯಾದ ಮಾರ್ಗದರ್ಶನವನ್ನು ನೀಡದೇ ಕರ್ತವ್ಯ ನಿರ್ಲಕ್ಷತೆ ತೋರಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವುದಾಗಿ ಉಲ್ಲೇಖಿಸಲಾಗಿದೆ.

ಆದ್ದರಿಂದ ಕರ್ನಾಟಕ ನಾಗರೀಕ ಸೇವಾ(ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳ ಅಡಿಯಲ್ಲಿ ನೋಟಿಸ್ ಜಾರಿಗೊಳಿಸಿದ್ದು, ಈ ಕರ್ತವ್ಯ ನಿರ್ಲಕ್ಷತೆಗೆ
ಶಾಲೆ, ಶಿಕ್ಷಕರ ಅನುದಾನಕ್ಕೆ ಕತ್ತರಿ
 ಶೇ.60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿ ರುವ ವಿಷಯ ಶಿಕ್ಷಕರನ್ನು ಗುರುತಿಸಿ ಅಂಥವರ ವಾರ್ಷಿಕ ವೇತನ ಬಡ್ತಿ ತಡೆಹಿಡಿಯುವುದು.
ಅನುದಾನ ಪಡೆಯುತ್ತಿರುವ ವಿಷಯ ಶಿಕ್ಷಕರು ನಿರಂತರ ಮೂರು ವರ್ಷಗಳಲ್ಲಿ ಶೇ.60ಕ್ಕಿಂತ ಕಡಿಮೆ ಫಲಿತಾಂಶ ನೀಡಿದರೆ ಅಂತಹ ವಿಷಯ ಶಿಕ್ಷಕರ ವೇತನವನ್ನು ತಡೆಹಿಡಿಯುವುದು.
ಒಂದು ಶಾಲೆಯೂ ಸತತ 5 ವರ್ಷಗಳಲ್ಲಿ ಶೇ.50 ರಷ್ಟು ಫಲಿತಾಂಶ ಬಾರದಿದ್ದರೆ ಶಾಲೆಯ ಅನುದಾನವನ್ನು ತಡೆಹಿಡಿಯುವುದು.
ಖಾಲಿ ಹುದ್ದೆಗೆ ನೇಮಕವಾಗಿರೋ ವಿಷಯ ಶಿಕ್ಷಕರ ವಿಷಯದಲ್ಲಿ ಶೇ.60 ರಷ್ಟು ಫಲಿತಾಂಶ ಬಾರದೇ ಇದ್ದರೆ ಶಿಕ್ಷಕರ ವಾರ್ಷಿಕ ವೇತನವನ್ನು ತಡೆಹಿಡಿಯುವುದು. 3 ವರ್ಷ ಸತತವಾಗಿ ಫಲಿತಾಂಶ ಕಡಿಮೆ ಬಂದರೆ ವೇತನಾನುದಾನ ಕಡಿತ ಮಾಡುವುದು.
ಏಕೆ ನೋಟಿಸ್‌ ಜಾರಿಗೊಳಿಸಬಾರದು ಎಂಬುದಕ್ಕೆ ಶಾಲಾ ಮುಖ್ಯಸ್ಥರಿಂದ ಲಿಖಿತ ಸಮಜಾಯಿಷಿಯನ್ನು ? ದಿನಗಳೊಳಗಾಗಿ ಶಾಲಾ ಶಿಕ್ಷಣ ಇಲಾಖೆ ಕಚೇರಿಗೆ ಸಲ್ಲಿಸಲು ಸೂಚಿಸಿದೆ........
Author

Arambh Suddi Kannada News True Newses And Stories Telecasting

Experienced journalist focused on global news, trends, and untold stories — with a commitment to accuracy and impact.

0/Post a Comment/Comments