ಆರಂಭ್ ಸುದ್ದಿ ಕನ್ನಡ


ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ಬಗ್ಗೆ ಚರ್ಚಿಸಲಾಗುತ್ತದೆ. ಅವಕಾಶ ನೀಡಲು ಒಂದು ದಿನಾಂಕವನ್ನು ನಿರ್ಧರಿಸಲಾಗುತ್ತದೆ.ಡಿ.ಕೆ ಶಿವಕುಮಾರ್

ಆರಂಭ್ ಸುದ್ದಿ ಕನ್ನಡ ಹೊಸ ದೆಹಲಿ11/06/25

ಜಾತಿ ಜನಗಣತಿ ದತ್ತಾಂಶವು ಸುಮಾರು 10 ವರ್ಷ ಹಳೆಯದಾಗಿರುವುದರಿಂದ ಪ್ರತಿಯೊಂದು ವರ್ಗದ ಪ್ರಮುಖರಿಗೂ ಈ ಬಗ್ಗೆ ಮಾತನಾಡಲು ಅವಕಾಶವನ್ನು ನೀಡಿ ಸಾಮಾಜಿಕ ನ್ಯಾಯ ಒದಗಿಸುವಂತೆ ವರಿಷ್ಠರು ಸಲಹೆ ನೀಡಿದ್ದಾರೆ. ಹೀಗಾಗಿ ಯಾವ ವರ್ಗದವರಿಂದಲೂ ಸಣ್ಣ ಅಪಸ್ವರ ಬಾರದಂತೆ, ಯಾರಿಗೂ ಅನ್ಯಾಯ ಆಗದಂತೆ ಅವಕಾಶವನ್ನು ನೀಡಲು ಚಿಂತನೆ ನಡೆಸಲಾಗುತ್ತಿದೆ.

ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ, ಮತ್ತೊಮ್ಮೆ ಜಾತಿ ಗಣತಿಗೆ ಅವಕಾಶ ನೀಡಲು ಹಾಗೂ ಆನ್‌ಲೈನ್‌ ಮೂಲಕವೂ ಅವಕಾಶ ಕಲ್ಪಿಸಲು ಒಂದು ದಿನಾಂಕವನ್ನು ನಿರ್ಧರಿಸುತ್ತೇವೆ. ಈ ಬಾರಿ ಮತ್ತೊಂದು ಸುವರ್ಣಾವಕಾಶ ನೀಡುತ್ತಿದ್ದೇವೆ, ಎಲ್ಲರೂ ಅವರ ಜಾತಿಯ ಗುರುತನ್ನು ನ್ಯಾಯಬದ್ಧವಾಗಿ ಸಮೀಕ್ಷಾ ತಂಡಕ್ಕೆ ನೀಡಬೇಕು. ಗಣತಿ ಎನ್ನುವುದು ಸುದೀರ್ಘ ಪ್ರಕ್ರಿಯೆ. ಯಾವಾಗಿನಿಂದ ಗಣತಿ ಆರಂಭವಾಗಲಿದೆ, ಹೇಗೆ ನಡೆಯಲಿದೆ ಎಂಬ ಬಗ್ಗೆ ಶೀಘ್ರವೇ ಮಾಹಿತಿ ಒದಗಿಸುತ್ತೇವೆ.

ಇನ್ನು, ಬೆಂಗಳೂರಿನಲ್ಲಿ ಆರ್‌ಸಿಬಿ ಸಂಭ್ರಮದ ವೇಳೆ ನಡೆದ ದುರ್ಘಟನೆ ಸೇರಿದಂತೆ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆಯೂ ನಾನು ಮತ್ತು ಮುಖ್ಯಮಂತ್ರಿಗಳು ಸೇರಿ ವರಿಷ್ಠರೊಂದಿಗೆ ಚರ್ಚಿಸಿದ್ದೇವೆ. ಘಟನೆ ಬಳಿಕ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವರಿಷ್ಠರ ಗಮನಕ್ಕೆ ತಂದಿದ್ದೇವೆ.

Author

Arambh Suddi Kannada News True Newses And Stories Telecasting

Experienced journalist focused on global news, trends, and untold stories — with a commitment to accuracy and impact.

0/Post a Comment/Comments