ಉದ್ಯೋಗ ಮೇಳದ ಪ್ರಯೋಜನ ಯುವಕ ಯುವತಿಯರು ಸದುಪಯೋಗ ಪಡೆದು ಕೊಳ್ಳಿ
ಜಲ್ಲಾ ಉದ್ಯೋಗಾಧಿಕಾರಿ ಮಹಮ್ಮದ್ ಅಕ್ಟರ್ ಸಲಹೆ..
ಚಾಮರಾಜನಗರ.ವಿದ್ಯಾರ್ಥಿಗಳು ಹಾಗೂ ನಿರುದ್ಯೋಗಿಗಳು ಉದ್ಯೋಗ ಮೇಳಗಳಲ್ಲಿ ಭಾಗವಹಿಸಿ ಉದ್ಯೋಗ ಗಿಟ್ಟಿಸಿಕೊಳ್ಳುವ ಮೂಲಕ ತಮ್ಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಮಹಮ್ಮದ್ ಅಕ್ಟರ್ ಸಲಹೆ ನೀಡಿದರು.
ನಗರದ ಹೊರವಲಯದಲ್ಲಿರುವ ಚಾಮರಾಜನಗರ ವಿಶ್ವವಿದ್ಯಾಲಯಲ್ಲಿ ಚಾ.ನಗರ ವಿವಿ, ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆ ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ
ಯೋಗದಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಸ್ತುತ ದಿನದಲ್ಲಿ ಜನಸಂಖ್ಯೆಯ ಜೊತೆ ವಿದ್ಯಾವಂತರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಎಲ್ಲರಿಗೂ ಉದ್ಯೋಗವಕಾಶವನ್ನು ಕಲಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಉದ್ಯೋಗ ಮೇಳಗಳನ್ನು ಆಯೋಜನೆ ಮಾಡಲಾಗುತ್ತಿದೆ ಎಂದರು.
ಇಂತಹ ಉದ್ಯೋಗ ಮೇಳದಲ್ಲಿ ಯಾವುದೇ ಮಧ್ಯವರ್ತಿಗಳ ಹಾವಳಿ ಇರುವುದಿಲ್ಲ. ಕಂಪನಿ ಹಾಗೂ ಅಭ್ಯರ್ಥಿಗಳ ನೇರ ಸಂದರ್ಶನ ಇರುತ್ತದೆ. ಆದ್ದರಿಂದ ಉದ್ಯೋಗ ಬಯಸುವ ಪ್ರತಿಯೊಬ್ಬರು ಉದ್ಯೋಗ ದ್ಯೋಗ ಮೇಳಗಳಲ್ಲಿ ಮೇಳಗಳಲ್ಲಿ ಭಾಗವಹಿಸುವ ಮೂಲಕ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು. ಮೈಸೂರು ವಿಭಾಗದ ಎಸ್‌ಬಿಐ ವ್ಯವಸ್ಥಾಪಕ ನಾಗರಾಜು ಮಾತನಾಡಿ, ಉದ್ಯೋಗ ಮೇಳದಲ್ಲಿ ಭಾಗವಹಿಸುವ ಕಂಪನಿಗಳು ಸಂದರ್ಶನಕ್ಕೆ ಬರುವ ಆಕಾಂಕ್ಷಿಗಳಿಗೆ ಆ ಉದ್ಯೋಗ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು. ಉದ್ಯೋಗವಿಲ್ಲದೇ ಪರದಾಟ ನಡೆಸುವಾಗ ಆಗುವಂತಹ ಕಷ್ಟನಷ್ಟಗಳ ಬಗ್ಗೆ, ಉದ್ಯೋಗದ ಬಗ್ಗೆ ತರಬೇತಿ ನೀಡಬೇಕು ಎಂದು ತಿಳಿಸಿದರು.
ಉದ್ಯೋಗ ಮೇಳದಲ್ಲಿ 20 ಕ್ಕೂ ಹೆಚ್ಚು ಕಂಪನಿಗಳು ಹಾಗೂ 400 ಕ್ಕೂ ಹೆಚ್ಚು ಉದ್ಯೋಗ ಆಕಾಂಕ್ಷಿಗಳು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಚಾಮರಾಜನಗರ ವಿವಿ ಉಪಕುಲಪತಿ ಪ್ರೊ.ಎಂ.ಆರ್.ಗಂಗಾಧರ್, ಕುಲಸಚಿವರಾದ ಆರ್.ಲೋಕನಾಥ್,
ಪ್ರೊ.ಜಿ.ವಿ.ವೆಂಕಟರಮಣ ಸೇರಿದಂತೆ ವಿವಿಧ ಕಂಪನಿಗಳ ಮುಖ್ಯಸ್ಥರು ಹಾಜರಿದ್ದರು..


Post a Comment