ಆರಂಭ್ ಸುದ್ದಿ ಕನ್ನಡ

ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಅನೇಕ ವಿಷಯಗಳ ಕುರಿತು ಸಭೆ!!!!!!!!!!!!!                                  ಆರಂಭ್ ಸುದ್ದಿಕನ್ನಡ      


      





ನವ ದೆಹಲಿಯ ಶಾಸ್ತ್ರಿ ಭವನದಲ್ಲಿ‌ ಇಂದು ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಅನೇಕ ವಿಷಯಗಳ ಕುರಿತು ಸಭೆ ನಡೆಸಲಾಯಿತು.

ಸಭೆಯಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಪೂರೈಕೆ ಆಗಬೇಕಿರುವ ಅಕ್ಕಿ, ಗೋಧಿ, ಅನುದಾನ ಹಾಗೂ ಅಂಗನವಾಡಿ FRS ಗಳಲ್ಲಿರುವ ತಾಂತ್ರಿಕ ಸಮಸ್ಯೆಗಳ ಕುರಿತು ಸುಧೀರ್ಘ ಕಾಲ ಚರ್ಚೆ ನಡೆಸಲಾಯಿತು.

ಈ ವೇಳೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಾದ ಅನಿಲ್ ಮಲ್ಲಿಕ್, ಹೆಚ್ಚುವರಿ ಕಾರ್ಯದರ್ಶಿಗಳಾದ ಪ್ರೀತಮ್ ಯಶವಂತ, ಜ್ಞಾನೇಶ್ ಭಾರತಿ, ವಿಶೇಷ ಕರ್ತವ್ಯಾಧಿಕಾರಿ ನಿಶ್ಚಲ್ ಬಿ.ಎಚ್, ಕಾರ್ಯದರ್ಶಿಗಳಾದ ಶ್ಯಾಮ್ಲಾ ಇಕ್ಬಾಲ್ ಉಪಸ್ಥಿತರಿದ್ದರು...

 

Author

Arambh Suddi Kannada News True Newses And Stories Telecasting

Experienced journalist focused on global news, trends, and untold stories — with a commitment to accuracy and impact.

0/Post a Comment/Comments