ಬೀದರ್ ಜಿಲ್ಲಾ ಯಲ್ಲಿ ಮಾದಕ ವಸ್ತು ಮಾರಾಟಗಾರರ ಮಾಹಿತಿ ಇದ್ದರೆ ಪೊಲೀಸ್ ಇಲಾಖೆಗೆ ನೀಡಿ!!ಎಸ್‌ಪಿ ಪ್ರದೀಪ್ ಗುಂಟಿ
ಬೀದರ. ಜೂನ್. 26 ಮಾದಕ ವ್ಯಾಸನಿಗಳ ಹಾಗೂ ಮಾದಕ ವಸ್ತುಗಳ ಮಾರಾಟ ಗಾರರ ಮಾಹಿತಿ ಇದ್ದರೆ ಪೊಲೀಸ್ ಇಲಾಖೆಗೆ ನೀಡಿ, ಅಂಥವರನ್ನು ಜೈಲಿಗೆ ಕಳಿಸುವ ಕೆಲಸವನ್ನು ನಾವು ಮಾಡುತ್ತೇವೆಂದು ಜಿಲ್ಲಾ ಪೊಲೀಸ್ ವರೀಷ್ಟಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿದರು
ಅವರು ಗುರುವಾರ ನಗರದ ಅಂಬೇಡ್ಕರ್ ವೃತ್ತದ ಬಳಿ ಪೊಲೀಸ್ ಇಲಾಖೆಯಿಂದ ಆಯೋಜಿದ ಅಂತರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಮತ್ತು ಸಾಗಾಣಿಕೆ ವಿರೋಧಿ ದಿನಾಚರಣೆ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರತಿಯೊಬ್ಬರು ಸಾಮಾಜಿಕ ಜವಾಬ್ದಾರಿ ತೆಗೆದುಕೊಳ್ಳಬೇಕು ಅಂದಾಗ ಮಾತ್ರ ಸಮಾಜವನ್ನು ನಶೆ ಮುಕ್ತ ಮಾಡಲು ಸಾದ್ಯವಾಗುತ್ತದೆ ಆದ್ದರಿಂದ ಎಲ್ಲರೂ ಪೊಲೀಸ್ ಇಲಾಖೆ ಸಹಕರಿಸಬೇಕು ಎಂದರು
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಜಾಗೃತಿ ಜಾಥಾ ಕಾರ್ಯಕ್ರಮವು ಬೀದರ್ ನಗರದ ವಿಶ್ವಗುರು ಬಸವೇಶ್ವರ ವೃತ್ತದಿಂದ ಪ್ರಾರಂಭವಾಗಿ, ಭಗತ್ ಸಿಂಗ್ ವೃತ್ತ, ಶಿವಾಜಿ ವೃತ್ತ, ಹರಳಯ್ಯ ವೃತ್ತ, ಬ್ರಿಮ್ಸ್ ಆಸ್ಪತ್ರೆ ರಸ್ತೆ ಮಾರ್ಗವಾಗಿ ಅಂಬೇಡ್ಕರ್ ವೃತ್ತ ತಲುಪಿತು. ಈ ಸಮಯದಲ್ಲಿ ಡ್ರಗ್ಸ್ ಮಾರಾಟ, ಮಾದಕ ವ್ಯಸನ ಹಾಗೂ ದುಶ್ಚಟಗಳಿಂದ ದೂರವಿರುವ ಬಗ್ಗೆ ಸಂದೇಶ ನೀಡುವ ಬಿತ್ತಿ ಪತ್ರಗಳನ್ನು ಹಿಡಿದು ಬೀದರ್ ಜಿಲ್ಲಾ ಪೊಲೀಸರೊಂದಿಗೆ ನೂರಾರು ವಿದ್ಯಾರ್ಥಿಗಳು ಹೆಜ್ಜೆ ಹಾಕಿದರು.
ಈ ಸಂದರ್ಭದಲ್ಲಿ ಬೀದರ ನಗರಸಭೆ ಅಧ್ಯಕ್ಷ ಮೊಹ್ಮದ್ ಗೌಸ್, ಹೆಚ್ಚುವರಿ ಎಸ್ಪಿ ಚಂದ್ರಕಾಂತ್ ಪೂಜಾರಿ, ಬೀದರ ಸಹಾಯಕ ಆಯುಕ್ತ ಮೊಹ್ಮದ್ ಶಕೀಲ್, ಬೀದರ ಅಬಕಾರಿ ಉಪ ಆಯುಕ್ತರಾದ ರವಿಶಂಕರ ಎ., ಡಿವೈಎಸ್ಪಿ ಶಿವನಗೌಡ ಪಾಟೀಲ್, ಆರೋಗ್ಯ ಇಲಾಖೆಯ ಅಧಿಕಾರಿಗಳು, ಸೇರಿದಂತೆ ಇತರೆ ಅಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಆರಂಭ್ ಸುದ್ದಿ ಕನ್ನಡ ARAMBH SUDDI NEWS NETWORK PRIVATE LIMITED


Post a Comment