ಆರಂಭ್ ಸುದ್ದಿ ಕನ್ನಡ

ಮಾದಕ ದ್ರವ್ಯ ಸೇವನೆ ಮುಕ್ತ ಜಿಲ್ಲೆಯಾಗಲೂ ಎಲ್ಲರೂ ಕೈಜೋಡಿಸಿ-ಎಸ್‌ಪಿ ಪ್ರದೀಪ ಗುಂಟಿ!!


ಬೀದರ. ಜೂನ್. 24 ಆರಂಭ್ ಸುದ್ದಿ ಕನ್ನಡ! ಬೀದರ ಜಿಲ್ಲೆಯನ್ನು ಮಾದಕ ದ್ರವ್ಯ ಸೇವನೆ ಮುಕ್ತ ಜಿಲ್ಲೆಯಾಗಲು ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಅವರು ತಿಳಿಸಿದರು.

ಅವರು ಮಂಗಳವಾರ ಬೀದರ ಪೊಲೀಸ್ ಉಪವಿಭಾಗದ ವತಿಯಿಂದ ಕರ್ನಾಟಕ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಮತ್ತು ಸಾಗಾಣಿಕೆ ವಿರೋಧಿ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಾದಕ ದ್ರವ್ಯ ಸೇವನೆಯಿಂದ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಇದರಿಂದಾಗಿ ವ್ಯಕ್ತಿ ತಾನು ಏನು ಮಾಡುತ್ತಿದ್ದಾನೆ ಎಂಬುವುದರ ಅರಿವು ಕೂಡ ಇರುವುದಿಲ್ಲ ಇಂತಹ ನಶೆಯಲ್ಲಿ ಇರುವರು ಕಳ್ಳತನ, ಕೊಲೆ, ದರೋಡೆ, ಲೈಂಗಿಕ ಕಿರುಕುಳ ಅಂತಹ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವರು ಆದ್ದರಿಂದ ಕೆಟ್ಟ ನಶೆಗಳಿಂದÀ ದೂರ ಸರಿದು ಉತ್ತಮ ಜೀವನ ಕಟ್ಟಿಕೊಳ್ಳಬೇಕು ಎಂದರು.

ನಶೆಯ ಜಗತ್ತನ್ನು ಬಿಟ್ಟು ಒಬ್ಬ ಉತ್ತಮ ನಾಗರಿಕರನ್ನಾಗಿ ಬಾಳಬೇಕು ಮತ್ತು ನಿಮ್ಮ ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ನೀಡಿ ಅವರನ್ನು ಉನ್ನತವಾದ ಹುದ್ದೆಗಳನ್ನು ಅಲಂಕರಿಸುವAತೆ ಮಾಡಬೇಕು. ಪೋಲಿಸ್ ಇಲಾಖೆ ಯಾವಾಗಲೂ ನಿಮ್ಮ ಸೇವೆಯಲ್ಲಿ ಇರುವುದು ಮತ್ತು ಎಲ್ಲರಿಗೂ ರಕ್ಷಣೆ ನೀಡುವುದು ನಮ್ಮ ಕರ್ತವ್ಯ ಎಂದರು.

ಬೀದರ ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್ ಮಾತನಾಡಿ, ನಾವು ನಮ್ಮ ಮಕ್ಕಳ ಬಗ್ಗೆ ಭವಿಷ್ಯದ ಯೋಚಿಸಬೇಕು ಮತ್ತು ಅವರು ಯಾವುದೇ ಮಾದಕ ದ್ರವ್ಯ ಸೇವನೆಗೆ ವ್ಯಾಸನರಾಗದಂತೆ ನೋಡಿಕೊಳ್ಳಬೇಕು ಎಂದರು. ಇವತ್ತು ನಮ್ಮ ಸಂವಿಧಾನ ನಮಗೆ ಮೂಲಭೂತ ಹಕ್ಕುಗಳನ್ನು ನೀಡಿದೆ ಅದರಲ್ಲಿ ಶಿಕ್ಷಣ ಮತ್ತು ಜೀವಿಸುವ ಹಕ್ಕು ಕೂಡ ಇದೆ ಆದ್ದರಿಂದ ನಾವು ಒಂದು ಸಮಾಜದಲ್ಲಿ ಬದುಕುವ ಎಲ್ಲಾ ಪ್ರಯತ್ನಗಳು ಮಾಡಬೇಕು. ನಶೆಯ ಜಗತ್ತಿನಿಂದ ಹೊರಬಂದು ಸ್ವಯಂ ಉದ್ಯೋಗ ಮಾಡಿವವರಿಗೆ ಬ್ಯಾಂಕ್‌ಗಳಿAದ ಸಾಲ ಸೌಲಭ್ಯ ಒದಗಿಸಲು ಬ್ಯಾಂಕ್ ಅಧಿಕಾರಿಗಳಿಗೆ ಮಾತನಾಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಡಿ.ವಾಯ್.ಎಸ್.ಪಿ. ಶಿವನಗೌಡ ಪಾಟೀಲ, ಎಸ್.ಬಿ.ಐ ನ ಪ್ರಾದೇಶಿಕ ವ್ಯವಸ್ಥಾಪಕ ಜೈ ಕುಮಾರ್, ಹೆಚ್ಚುವರಿ ಡ್ರಗ್ಸ್ ಕಂಟ್ರೋಲರ್ ಧನಂಜಯ, ಮನೋರೋಗ ತಜ್ಞ ರಾಘವೇಂದ್ರ ವಾಗ್ನರೆ, ರೈಲ್ವೆ ಪೋಲಿಸ್ ಠಾಣೆ ಅಧಿಕಾರಿ ಪಾಷಾ, ಎಎಸ್‌ಐಆರ್‌ಪಿಎಫ್ ಸಿ.ಎಚ್. ಶ್ರೀನಿವಾಸ, ವಕೀಲರು ಮತ್ತು ಮಾಂಗರವಾಡಿ ಸಂಘದ ರಾಜ್ಯಾಧ್ಯಕ್ಷ ಅನೀಲ ಕೂಮಾರ ಕಾಂಬ್ಳೆ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Author

Arambh Suddi Kannada News True Newses And Stories Telecasting

Experienced journalist focused on global news, trends, and untold stories — with a commitment to accuracy and impact.

0/Post a Comment/Comments