ಗದಗ ಬಾಲಕಿಯರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪದ ಮೇಲೆ ಕಂಬಕ್ಕೆ ಕಟ್ಟಿ ಮೂವರು ಬಾಲಕರಿಗೆ ಹಿಗ್ಗಾಮುಗ್ಗಾ ಥಳಿತ ನೀಡಿದ್ದಾರೆ.
ಗದಗ=ಅಪ್ರಾಪ್ತ ಬಾಲಕರನ್ನು ದಲಿತ ಸಮುದಾಯಕ್ಕೆ ಸೇರಿದವರು ಎಂದು ಹೇಳಲಾಗುತ್ತಿದ್ದು, ಜಾತಿ ಸಂಘರ್ಷ ಬೆದರಿಕೆ ಇರುವುದರಿಂದ ಗ್ರಾಮದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ತಿಳಿದುಬಂದಿದೆ.
ಘರ್ಷಣೆಯ ಭಯದಿಂದ ಸ್ಥಳೀಯ ನಿವಾಸಿಗಳು ಹೊರಗೆ ಹೋಗಲು ಹೆದರುತ್ತಿರುವುದರಿಂದ ಗ್ರಾಮದಲ್ಲಿ ಸ್ಮಶಾನ ಮೌನ ನಿರ್ಮಾಣವಾಗಿದೆ. ಘಟನೆ ಸಂಬಂಧ ಇಲ್ಲಿಯವರೆಗೆ ಎಂಟು ಗ್ರಾಮಸ್ಥರನ್ನು ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಈ ಘಟನೆ ಮೇ 28 ರಂದು ನಡೆದಿದ್ದರೂ, ದೂರು ದಾಖಲಾದ ನಂತರ ಮೇ 30 ರಂದು ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಗ್ರಾಮಸ್ಥರು ನಮಗೆ ಬೆದರಿಕೆ ಹಾಕಿದ್ದರು. ಬಳಿಕ ಬಾಲಕ ವಿಷ ಸೇವಿಸಿದ್ದಾನೆಂದು ಪೋಷಕರು ಹೇಳಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ, ಗದಗ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಗ್ರಾಮಕ್ಕೆ ಧಾವಿಸಿ ನಿವಾಸಿಗಳೊಂದಿಗೆ ಮಾತನಾಡಿದರು. ಆದರೆ, ಗ್ರಾಮದ ಕೆಲವು ಹಿರಿಯರು ಇದು ಜಾತಿ ಸಮಸ್ಯೆಯಾಗಿ ಬದಲಾಗಬಹುದು ಎಂದು ಪೊಲೀಸರಿಗೆ ಎಚ್ಚರಿಕೆ ನೀಡಿದ್ದು, ಬಳಿಕ ಪೊಲೀಸರು ಎರಡೂ ಕಡೆಯಿಂದಲೂ ದೂರುಗಳನ್ನು ದಾಖಲಿಸಿಕೊಂಡಿದ್ದಾರಂದು ತಿಳಿದುಬಂದಿದೆ.
ಎರಡೂ ಕಡೆಯವರು ಪ್ರಕರಣಗಳನ್ನು ದಾಖಲಿಸಿರುವುದರಿಂದ, ತನಿಖೆ ನಡೆಸಲಾಗುತ್ತಿದೆ. ಪರಿಸ್ಥಿತಿಯನ್ನು ಶಮನಗೊಳಿಸಲು ಶಾಂತಿ ಸಭೆ ಕರೆಯಲಾಗುವುದು ಎಂದು ನೇಮಗೌಡ ಅವರು ತಿಳಿಸಿದ್ದಾರೆ.ಜಿಲ್ಲೆಯ ನರಗುಂದ ತಾಲ್ಲೂಕಿನಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಮೇ 28ರಂದು ನಡೆದ ಈ ಘಟನೆಯ ಬಗ್ಗೆ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕರ ಪೋಷಕರು ಮತ್ತು ಸಂಬಂಧಿಕರು 55 ಗ್ರಾಮಸ್ಥರ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಿಸಿದ್ದರೆ, ಗ್ರಾಮಸ್ಥರು ಮೂವರು ಬಾಲಕರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ....

Post a Comment