ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೃಷಿ ಮಹಾವಿದ್ಯಾಲಯದ ಶಂಕುಸ್ಥಾಪನೆ ಉಪಮುಖ್ಯಮಂತ್ರಿಗಳಾದ ಶ್ರೀ DK SHIVKUMAR!!!!
ಕನಕಪುರದ ಗಾಂಧಿ ಎಂದೇ ಕರೆಯಲ್ಪಡುವ ಪೂಜ್ಯ ಶ್ರೀ ಎಸ್. ಕರಿಯಪ್ಪನವರ ಹೆಸರಿನಲ್ಲಿ ಬೆಂಗಳೂರಿನ ದಕ್ಷಿಣ ಜಿಲ್ಲೆಯ ಹಾರೋಹಳ್ಳಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಎಸ್. ಕರಿಯಪ್ಪ ಕೃಷಿ ಮಹಾವಿದ್ಯಾಲಯದ ಶಂಕುಸ್ಥಾಪನೆಯನ್ನು ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ DK Shivakumar ಅವರು ಹಾಗೂ ಇತರೆ ಗಣ್ಯರೊಂದಿಗೆ ಸೇರಿ ನೆರವೇರಿಸಿದೆ.
ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಬೇಕೆಂದು ಕರಿಯಪ್ಪನವರು ಆರ್.ಇ.ಎಸ್. ವಿದ್ಯಾಸಂಸ್ಥೆಯನ್ನು ಕಟ್ಟಿ, ಬೆಳೆಸಿದ್ದಾರೆ. ಕನಕಪುರದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡುವಲ್ಲಿ ಅವರ ಯೋಗದಾನ ಬಹಳಷ್ಟಿದೆ. ಈಗ ಅವರ ಹೆಸರಿನಲ್ಲಿ ಕೃಷಿ ಮಹಾವಿದ್ಯಾಲಯ ತಲೆ ಎತ್ತುತ್ತಿರುವುದು ಬಹಳಷ್ಟು ಸಂತೋಷ ತಂದಿದೆ. ಗ್ರಾಮೀಣ ಭಾಗದ ಮಕ್ಕಳು ವೈಜ್ಞಾನಿಕವಾಗಿ ಕೃಷಿ ಪದ್ಧತಿಗಳು ಹಾಗೂ ಕೃಷಿ ಚಟುವಟಿಕೆಗಳ ಬಗ್ಗೆ ಅಧ್ಯಯನ ಮಾಡಲು ಈ ಸಂಸ್ಥೆಯು ಭದ್ರ ಬುನಾದಿಯಾಗಲಿ.....
Post a Comment