ಆರಂಭ್ ಸುದ್ದಿ ಕನ್ನಡ

ಸಾಂವಿಧಾನಿಕ ತನಿಖಾ ಸಂಸ್ಥೆಯಾದ EDಯನ್ನು ಮೋದಿ ಸರ್ಕಾರ ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ. ಸಚಿವರು ದಿನೇಶ್ ಗುಂಡೂರಾವ್!!!

ಬೆಂಗಳೂರು12JUNE 25 ಆರಂಭ್ ಸುದ್ದಿ ಕನ್ನಡ ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ಜಾರಿ ನಿರ್ದೇಶನಾಲಯ ಮತ್ತೆ ದಾಳಿ ನಡೆಸಿದೆ. ಜಾರಿ ನಿರ್ದೇಶನಾಲಯದ ವೈಶಿಷ್ಟ್ಯವೇನೆಂದರೆ ಅದು ದಾಳಿ ಮಾಡುವುದು ಬಿಜೆಪಿಯೇತರ ನಾಯಕರ ಮೇಲೆ ಮಾತ್ರ. ಇಲ್ಲಿಯವರೆಗೂ ED ಬಿಜೆಪಿ ನಾಯಕರ ತಂಟೆಗೆ ಹೋಗಿಲ್ಲ. ಹೋಗುವುದು ಇಲ್ಲ. ಇದೊಂದು ವಿಸ್ಮಯ.
ಕಾಂಗ್ರೆಸ್ ನಾಯಕರನ್ನೇ ನಿರ್ದಿಷ್ಟವಾಗಿ ಗುರಿಯಾಗಿಸಿಕೊಂಡು ದಾಳಿ ನಡೆಸುವ 'ಜಾರಿ ನಿರ್ದೇಶನಾಲಯ' ತನ್ನ ಹೆಸರನ್ನು 'ಕಾಂಗ್ರೆಸ್ ವಿರೋಧಿ ನಿರ್ದೇಶನಾಲಯ' ಎಂದು ಬದಲಾಯಿಸಿಕೊಳ್ಳುವುದು ಸೂಕ್ತ. ಯಾಕೆಂದರೆ ಜಾರಿ ನಿರ್ದೇಶನಾಲಯದ ಪ್ರೈಮ್ ಟಾರ್ಗೆಟ್ ಕಾಂಗ್ರೆಸ್ ನಾಯಕರೆ‌ ಹೊರತು ಬಿಜೆಪಿಯವರಲ್ಲ.
ಇತ್ತೀಚೆಗಷ್ಟೆ ತಮಿಳುನಾಡಿನ TASMAC ಹಗರಣದಲ್ಲಿ ED ನಡೆಯನ್ನು ಸುಪ್ರೀಂ ಕೋರ್ಟ್ ಕಟು ಮಾತುಗಳಲ್ಲಿ ಟೀಕಿಸಿದೆ. ED ಎಲ್ಲಾ‌ ಮಿತಿಗಳನ್ನು ಮೀರುತ್ತಿದೆ ಎಂದು ಸುಪ್ರೀಂ ಎಚ್ಚರಿಕೆ ನೀಡಿದೆ. ಆದರೂ ED ಅಧಿಕಾರಿಗಳು BJP ಕಾರ್ಯಕರ್ತರಂತೆ ವರ್ತಿಸುತ್ತಿದ್ದಾರೆ.
ಇಡಿ ದಾಳಿಯಲ್ಲಿ ಕಾನೂನಿನ ಉಲ್ಲಂಘನೆಯಾಗಿದ್ದರೆ ಅದಕ್ಕೆ ನಾವು ಬೆಂಬಲಿಸುವುದಿಲ್ಲ. ಕಾನೂನು ಪ್ರಕಾರವಾಗಿ ಕ್ರಮ ಕೈಗೊಳ್ಳಲಿ. ಕಾನೂನಿನ ಅನುಷ್ಠಾನಕ್ಕೆ ಅಡ್ಡಿಪಡಿಸುವುದಿಲ್ಲ.
ಸಾಂವಿಧಾನಿಕ ತನಿಖಾ ಸಂಸ್ಥೆಯಾದ EDಯನ್ನು ಮೋದಿ ಸರ್ಕಾರ ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ. ED ರಾಜಕೀಯ ಪಕ್ಷವೊಂದರ ಆಜ್ಞಾಪಾಲಕರಾದರೆ ಆ ಸಂಸ್ಥೆಗೆ ಸಾಂವಿಧಾನಿಕ ಪಾವಿತ್ರ್ಯತೆ ಇರಲು ಹೇಗೆ ಸಾಧ್ಯ‌.? ಆ ಸಂಸ್ಥೆಯಿಂದ ಪ್ರಜಾಪ್ರಭುತ್ವದ ಮೌಲ್ಯ ಉಳಿಯಲು ಹೇಗೆ ಸಾಧ್ಯ.?....

Author

Arambh Suddi Kannada News True Newses And Stories Telecasting

Experienced journalist focused on global news, trends, and untold stories — with a commitment to accuracy and impact.

0/Post a Comment/Comments