ಆರಂಭ್ ಸುದ್ದಿ ಕನ್ನಡ

ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಸಿಎಂ ಸಿದ್ದರಾಮಯ್ಯ!


!
ಮೈಸೂರು, ಜೂನ್ 30: ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ, ಯಾರೂ ಏನೂ ಹೇಳಿದರು ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ. ಕೇಳುವುದಿಲ್ಲ. ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಅವರು ಇಂದು ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಸುರ್ಜೆವಾಲಾ ಅಭಿಪ್ರಾಯ ಪಡೆಯಲಿದ್ದಾರೆ

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕಾರ್ಯದರ್ಶಿ ಸುರ್ಜೆವಾಲಾ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಬಗ್ಗೆ ಮಾತನಾಡಿ ಅವರು ಅಭಿಪ್ರಾಯ ಕೇಳಿ, ಅವರ ಕೆಲಸವನ್ನು ಮಾಡುತ್ತಾರೆ ಎಂದರು. 

ಬಿಜೆಪಿ ಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು

ಸಿದ್ದರಾಮಯ್ಯ ಅವರು ಈ ಬಾರಿಯ ದಸರಾ ಉದ್ಘಾಟಿಸುವುದಿಲ್ಲ ಎಂದು ಬಿಜೆಪಿಯವರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಶ್ರೀರಾಮುಲು ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಅವರು ಹೇಗೆ ಭವಿಷ್ಯ ನುಡಿಯುತ್ತಾರೆ ಎಂದು ಪ್ರಶ್ನಿಸಿದರು...!

Author

Arambh Suddi Kannada News True Newses And Stories Telecasting

Experienced journalist focused on global news, trends, and untold stories — with a commitment to accuracy and impact.

0/Post a Comment/Comments