ಆರಂಭ ಸುದ್ದಿ ಕನ್ನಡ

ಕುಸುಮ್ ಬಿ ಸೋಲಾರ್ ಕೃಷಿ ಪಂಪ್ಸೆಟ್ ಅಳವಡಿಸಲುಕೇಂದ್ರಸರ್ಕಾರ ಶೇ30,ರಾಜ್ಯ ಸರ್ಕಾರ ಶೇ50ರಷ್ಟು ಸಬ್ಸಿಡಿಸಿಎಂ ಸಿದ್ದರಾಮಯ್ಯ


ಬೆಂಗಳೂರು ಆರಂಭ ಸುದ್ದಿ 23-07-2025       
ಬೆಂಗಳೂರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕುಸುಮ್ ಬಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ

ಕುಸುಮ್ ಬಿ ಯೋಜನೆಯಡಿ ಸೋಲಾರ್ ಕೃಷಿ ಪಂಪ್ಸೆಟ್ ಅಳವಡಿಸಲು, ಕೇಂದ್ರ ಸರ್ಕಾರ ಶೇ.30, ರಾಜ್ಯ ಸರ್ಕಾರ ಶೇ.50ರಷ್ಟು ಸಬ್ಸಿಡಿ ಒದಗಿಸುತ್ತಿದ್ದು, ಫಲಾನುಭವಿಗಳು ಶೇ.20ರಷ್ಟು ಭರಿಸಬೇಕಿದೆ. 

ಈ ಯೋಜನೆಯಡಿ 40ಸಾವಿರ ಪಂಪ್ಸೆಟ್ಗಳಿಗೆ ಅನುಮೋದನೆ ನೀಡಲಾಗಿದ್ದು, ಇದನ್ನು ಅನುಷ್ಠಾನಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಅವರು ಸೂಚಿಸಿದರು.

25ಸಾವಿರ ರೈತರು ಹೆಚ್ಚುವರಿಯಾಗಿ ಕುಸುಮ್ ಬಿ ಯೋಜನೆಯಡಿ ಅರ್ಜಿ ಸಲ್ಲಿಸಿದ್ದಾರೆ. ಯೋಜನೆಯಡಿ ರಾಜ್ಯ ಸರ್ಕಾರ 752 ಕೋಟಿ ರೂ. ವೆಚ್ಚ ಮಾಡಲಿದೆ. ಯೋಜನೆ ಸಮರ್ಪಕ ಅನುಷ್ಠಾನಗೊಳಿಸಿದ ಬಳಿಕ ಸಬ್ಸಿಡಿ ಮೊತ್ತ ಕಡಿಮೆಯಾಗಲಿದೆ.

4.5ಲಕ್ಷ ಅನಧಿಕೃತ ಐಪಿ ಸೆಟ್ಗಳ ಪೈಕಿ 2ಲಕ್ಷ ಐಪಿ ಸೆಟ್ ಸಂಪರ್ಕ ಅಧಿಕೃತಗೊಳಿಸಲಾಗಿದೆ. ಈ ಅನಧಿಕೃತ ಐಪಿ ಸೆಟ್ಗಳನ್ನು ಕುಸುಮ್ ಬಿ ಯೋಜನೆಯಡಿ ಆದ್ಯತೆ ಮೇಲೆಗೆ ತರುವ ಬಗ್ಗೆ ಚರ್ಚೆ. 

ರೈತರಿಗೆ ಸ್ವಯಂ ವಿದ್ಯುತ್ ಮೂಲಸೌಕರ್ಯ ಕಲ್ಪಿಸಲು ಅವಕಾಶ ಕಲ್ಪಿಸಲಾಗುತ್ತಿದ್ದು, ಟ್ರಾನ್ಸ್ಫಾರ್ಮರ್ಗಳನ್ನು ಇಲಾಖೆ ಒದಗಿಸಲಿದೆ. 

ನೀರಾವರಿ ಪಂಪ್ ಸೆಟ್ ಗಳಿಗೆ 2024-25ರ ಸಾಲಿನಲ್ಲಿ 12785 ಕೋಟಿ ರೂಪಾಯಿಗಳ ಅನುದಾನ ಹಂಚಿಕೆ ಆಗಿದ್ದು ಫೆಬ್ರವರಿ 2025 ವರೆಗೆ ರೂ. 11720ಕೋಟಿ ಬಿಡುಗಡೆ ಆಗಿದೆ. 2025-26ರಲ್ಲಿ 16021 ಕೋಟಿ ರೂಪಾಯಿಗಳ ಆಯವ್ಯಯ ಹಂಚಿಕೆ ಆಗಿದೆ 

ಇಂಧನ ಸಚಿವ ಕೆ ಜೆ ಜಾರ್ಜ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.ಆರಂಭ ಸುದ್ದಿ ಕನ್ನಡ 23-07-2025

Author

Arambh Suddi Kannada News True Newses And Stories Telecasting

Experienced journalist focused on global news, trends, and untold stories — with a commitment to accuracy and impact.

0/Post a Comment/Comments