ಮಂಗಳೂರಿನಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ನೂತನ ಕಚೇರಿ ದೇವರಾಜ ಅರಸು ಭವನವದ ಉದ್ಘಾಟನೆಯನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್!!!
ಮಂಗಳೂರು ಆರಂಭ ಸುದ್ದಿ ಕನ್ನಡ 25-07-2025, www.arambhsuddikannada.com...ಮಂಗಳೂರಿನಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ನೂತನ ಕಚೇರಿ ದೇವರಾಜ ಅರಸು ಭವನವದ ಉದ್ಘಾಟನೆಯನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ನೆರವೇರಿಸಿದರು. ಅಲ್ಲದೇ 4 ಕೋಟಿ ವೆಚ್ಚದಲ್ಲಿ ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ ಶಿಲನ್ಯಾಸ ನೆರವೇರಿಸಿದರು.
ಉನ್ನತ ಶಿಕ್ಷಣಕ್ಕಾಗಿ ದೂರದಿಂದ ಮಂಗಳೂರಿಗೆ ಬರುವ ವಿದ್ಯಾರ್ಥಿನಿಯರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಇಂದಿರಾ ಗಾಂಧಿ ಮೆಟ್ರಿಕ್ ನಂತರದ ಮಹಿಳಾ ನರ್ಸಿಂಗ್ ವಿದ್ಯಾರ್ಥಿ ನಿಲಯ ಸ್ಥಾಪಿಸಲಾಗಿದ್ದು, 5 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಕಟ್ಟಡವನ್ನು ಸಚಿವ ದಿನೇಶ್ ಗುಂಡೂರಾವ್ ಲೋಕಾರ್ಪಣೆ ಗೊಳಿಸಿದರು. ಅಲ್ಲದೇ 5 ಕೋಟಿ ವೆಚ್ಚದಲ್ಲಿ ಮೆಟ್ರಿಕ್ ನಂತರದ ಮಾದರಿ ಬಾಲಕಿಯರ ವಿದ್ಯಾರ್ಥಿ ನಿಲಯ ಸ್ಥಾಪನೆಗೆ ಶಿಲಾನ್ಯಾಸ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಅವರು ಉಪಸ್ಥಿತರಿದ್ದರು.... Arambh suddi kannada
Post a Comment