ಬೀದರ್ ಜಿಲ್ಲಾ ಔರಾದ್ ನಲ್ಲಿ ಜುಲೈ 31 ಕೆ ತಾಲೂಕು ಘಟಕದಿಂದ ಪತ್ರಿಕಾ ದಿನಾಚರಣೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಶಿವಾನಂದ ಮೊಕ್ತದಾರ್!!!!!!
ಬೀದರ್ ಔರಾದ್ ಆರಂಭ ಸುದ್ದಿ ಕನ್ನಡ 28-07-25ಬೀದರ್ ಜಿಲ್ಲಾ ಔರಾದ್ ತಾಲೂಕು ಪಂಚಾಯತ ಸಭಾಂಗಣದಲ್ಲಿ ಇದೇ ಜುಲೈ 31 ರಂದು ಬೆಳೆಗ್ಗೆ 10:30 ಗಂಟೆಗೆ ಗುರುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕದಿಂದ ಪತ್ರಿಕಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ತಾಲೂಕು ಅಧ್ಯಕ್ಷ ಶಿವಾನಂದ ಮೊಕ್ತದಾರ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು, ಪ್ರತಿ ವರ್ಷದಂತೆ ಈ ವರ್ಷವು ಪತ್ರಿಕಾ ದಿನಾಚರಣೆ ಆಚರಿಸಲಾಗುತ್ತಿದೆ. ಬಸವಕಲ್ಯಾಣದ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷರಾದ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಲಿದ್ದಾರೆ ಭಾಲ್ಕಿ ಹಿರೇಮಠ ಸಂಸ್ಥಾನದ ಶ್ರೀಗಳಾದ ಗುರುಬಸವ ಪಟ್ಟದ್ದೇವರು ಸಾನಿಧ್ಯ ವಹಿಸಲಿದ್ದಾರೆ ಶಾಸಕ ಪ್ರಭು ಚವ್ಹಾಣ ಕಾರ್ಯಕ್ರಮ ಉದ್ಘಾಟಿಸುವರು. ಮಾಜಿ ಎಂಎಲ್ಸಿ ವಿಜಯಸಿಂಗ್ ಸಸಿ ನೆಡುವ ಮೂಲಕ ಚಾಲನೆ ನೀಡುವರು. ವಿಜಯ ಕರ್ನಾಟಕ ಕಲಬುರಗಿ ಆವೃತ್ತಿಯ ಸ್ಥಾನಿಕ ಸಂಪಾದಕರಾದ ದೇವಯ್ಯ ಗುತ್ತೇದಾರ್ ಉಪನ್ಯಾಸ ನೀಡುವರು. ಸಂಘದ ಜಿಲ್ಲಾಧ್ಯಕ್ಷ ಡಿಕೆ ಗಣಪತಿ ಅಧ್ಯಕ್ಷತೆ ವಹಿಸುವರು. ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ,
ತಹಸೀಲ್ದಾರ ಮಹೇಶ ಪಾಟೀಲ್, ತಾಪಂ ಇಒ ಶಿವಕುಮಾರ ಘಾಟೆ, ಸಿಪಿಐ ರಘುವೀರಸಿಂಗ್ ಠಾಕೂರ್, ನಿಕಟಪೂರ್ವ ಅಧ್ಯಕ್ಷ ಶರಣಪ್ಪ ಚಿಟಮೇ, ಸಂಘದ ಜಿಲ್ಲಾ ಪ್ರ.ಕಾರ್ಯದರ್ಶಿ ಶಿವಕುಮಾರ ಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ನಾಗಶೆಟ್ಟಿ ಧರಂಪೂರೆ, ಜಿಲ್ಲಾ ಕಾರ್ಯದರ್ಶಿ ಪ್ರಥ್ವಿರಾಜ್ ಎಸ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಂಘದ ತಾಲೂಕು ಉಪಾಧ್ಯಕ್ಷ ಮನ್ಮಥ ಸ್ವಾಮಿ ಸ್ವಾಗತಿಸುವರು. ಪತ್ರಕರ್ತರಾದ ರಿಯಾಜ್ ಪಾಶಾ ಕೊಳ್ಳುರ್, ಅಮರ ಸ್ವಾಮಿ ನಿರೂಪಿಸುವರು. ಪತ್ರಕರ್ತ ಮಲ್ಲಪ್ಪ ಗೌಡಾ ವಂದಿಸುವರು. ಹೆಚ್ಚಿನ ಸಂಖ್ಯೆಯ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಕನ್ನಡಾಭಿಮಾನಿಗಳು ಭಾಗವಹಿಸುವಂತೆ ಪ್ರಧಾನ ಕಾರ್ಯದರ್ಶಿ ಸುನಿಲ ಜಿರೋಬೆ ಮನವಿ ಮಾಡಿದ್ದಾರೆ..... www.arambhsuddikannada.com....
Post a Comment