ಯಾದಗಿರಿ ಜಿಲ್ಲೆಯ ಕೆಂಭಾವಿಯಲ್ಲಿ ವಿದ್ಯುತ್ಆಘಾತದಿಂದ ಮೂವರು ರೈತರುಸಾವನ್ನಪ್ಪಿದ್ದಾರೆ!!!!
ಆರಂಭ ಸುದ್ದಿ ಕನ್ನಡ 21/07/2025 ಯಾದಗಿರಿ ಜಿಲ್ಲೆಯ ಕೆಂಭಾವಿಯ ಅಗತೀರ್ಥ ಗ್ರಾಮದಲ್ಲಿ ಒಂದು ದುರಂತ ಘಟನೆ ನಡೆದಿದೆ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ತಂತಿ ತುಳಿದು ಮೂವರು ರೈತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಗ್ರಾಮದ ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ಈರಪ್ಪ (40) ಟ್ರಾನ್ಸ್‌ಫಾರ್ಮರ್ ಬಳಿ ಬಿದ್ದಿದ್ದ ಸರ್ವಿಸ್ ವೈರ್ ಅನ್ನು ಆಕಸ್ಮಿಕವಾಗಿ ತುಳಿದು ವಿದ್ಯುತ್ ಆಘಾತಕ್ಕೊಳಗಾಗಿದ್ದಾರೆ. ಅವರನ್ನು ರಕ್ಷಿಸಲು ಓಡಿ ಬಂದ ಸುರೇಶ್ (23) ಮತ್ತು ನಂತರ ಅವರನ್ನು ರಕ್ಷಿಸಲು ಯತ್ನಿಸಿದ ದೇವು ಅಗತೀರ್ಥ (30) ಅವರಿಗೂ ವಿದ್ಯುತ್ ಆಘಾತವಾಗಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈರಪ್ಪ ಮತ್ತು ಸುರೇಶ್ ಸದಾಬ್ ಗ್ರಾಮದವರಾಗಿದ್ದರೆ, ದೇವು ಅಗತೀರ್ಥ ಅಗತೀರ್ಥ ಶಿಬಿರದ ನಿವಾಸಿಯಾಗಿದ್ದರು.
ಸ್ಥಳೀಯ ಜನರು ಗಾಯಾಳುಗಳನ್ನು ತಕ್ಷಣ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರೂ, ವೈದ್ಯರು ಅವರನ್ನು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಈ ಘಟನೆಯಿಂದ ಕುಟುಂಬ ಆಘಾತಕ್ಕೊಳಗಾಗಿದ್ದು, ಆಸ್ಪತ್ರೆ ಆವರಣದಲ್ಲಿ ಶೋಕ ಮಡುಗಟ್ಟಿದೆ.
ಜಾಸ್ಕಾಂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಅವರ ನಿರ್ಲಕ್ಷ್ಯದಿಂದಲೇ ಈ ಘಟನೆ ಸಂಭವಿಸಿದೆ ಎಂದು ಹೇಳಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ.....ಆರಂಭ ಸುದ್ದಿಕನ್ನಡ

Post a Comment