ಆರಂಭ ಸುದ್ದಿ ಕನ್ನಡ


ಯುಪಿಐ ಅಡಿ ರೂ. 40ಲಕ್ಷಕ್ಕೂ ಅಧಿಕ ವಹಿವಾಟು ಮಾಡಿರುವವರಿಗೆ ಮಾತ್ರ ಜಿಎಸ್ಟಿ ನೊಟೀಸ್ ನೀಡಲಾಗಿದೆ. ಆರಂಭದಲ್ಲಿ ಜಿಎಸ್ಟಿ ನೊಂದಣಿ ಮಾಡುವಂತೆ ನೋಟಿಸ್ ನೀಡಲಾಗಿತ್ತು.!!!

ಬೆಂಗಳೂರು ಆರಂಭ ಸುದ್ದಿ ಕನ್ನಡ  ಸಣ್ಣ ವ್ಯಾಣಿಜ್ಯೋದ್ಯಮಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ಜಿಎಸ್ಟಿ ನೊಟೀಸ್ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಹಾಗೂ ಸಭೆ ಬಳಿಕ ಮಾಧ್ಯಮ ಗೋಷ್ಠಿಯಲ್ಲಿ ಮುಖ್ಯಮಂತ್ರಿ

ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ಹಳಿದರು ಜಿಎಸ್ಟಿ ತೆರಿಗೆಯನ್ನು ಕೇಂದ್ರ ಹಣಕಾಸು ಸಚಿವರ ಅಧ್ಯಕ್ಷತೆಯ ಜಿಎಸ್ಟಿ ಕೌನ್ಸಿಲ್ ನಿರ್ಧರಿಸುತ್ತದೆ. ಈ ತೆರಿಗೆ ಸಂಗ್ರಹದಲ್ಲಿ ಶೇ.50ರಷ್ಟನ್ನು ರಾಜ್ಯಕ್ಕೆ ನೀಡಲಾಗುತ್ತದೆ. ದೇಶದಲ್ಲೇ ಕರ್ನಾಟಕ ಜಿಎಸ್ಟಿ ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದೆ.

ಸರ್ಕಾರ ಪಾರದರ್ಶಕವಾಗಿ ಕಾರ್ಯನಿರ್ವಹಿಸಲಿದ್ದು, ಯಾರಿಗೂ ತೊಂದರೆಯಾಗದಂತೆ ಖಾತ್ರಿಪಡಿಸಲಾಗುವುದು. ವ್ಯಾಪಾರಿಗಳಿಗೆ ನೆರವು ನೀಡಲು ಈಗಲೇ ಸಹಾಯವಾಣಿ ಇದ್ದು, ಇದನ್ನು ಪರಿಣಾಮಕಾರಿಯಾಗಿಸಬೇಕು.

ಸಣ್ಣ ವ್ಯಾಪಾರಿಗಳಿಗೆ ನೆರವಾಗುವಂತೆ ಸಹಾಯವಾಣಿ ಆರಂಭಿಸಬೇಕುʼ.

ಜಿಎಸ್ಟಿ ಕುರಿತು ಸರಿಯಾಗಿ ಮಾಹಿತಿ ಇಲ್ಲದ ಕಾರಣ ಗೊಂದಲ ಉಂಟಾಗಿದೆ. ಜಾಗೃತಿ ಕಾರ್ಯಕ್ರಮ ಕೈಗೊಳ್ಳಬೇಕು. ಒಂದು ಬಾರಿಗೆ ಹಳೆಯ ಬಾಕಿಯನ್ನು ಮನ್ನಾ ಮಾಡಬೇಕು ಎಂದು ಮನವಿ ಸಲ್ಲಿಸಿದರು.

ಯುಪಿಐ ಅಡಿ ರೂ. 40ಲಕ್ಷಕ್ಕೂ ಅಧಿಕ ವಹಿವಾಟು ಮಾಡಿರುವವರಿಗೆ ಮಾತ್ರ ಜಿಎಸ್ಟಿ ನೊಟೀಸ್ ನೀಡಲಾಗಿದೆ. ಆರಂಭದಲ್ಲಿ ಜಿಎಸ್ಟಿ ನೊಂದಣಿ ಮಾಡುವಂತೆ ನೋಟಿಸ್ ನೀಡಲಾಗಿತ್ತು.

ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಅಗತ್ಯ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದ್ದು, ಅಂತಹ ವ್ಯಾಪಾರಿಗಳಿಗೆ ನೊಟೀಸ್ ಕೊಟ್ಟಿದ್ದರೂ, ಅವರಿಂದ ತೆರಿಗೆ ವಸೂಲು ಮಾಡುವುದಿಲ್ಲ. ಆದರೆ ಯಾರು ಕಾಯ್ದೆ ಪ್ರಕಾರ ತೆರಿಗೆ ಕಟ್ಟಬೇಕಾಗಿದೆಯೋ ಅವರು ಕಟ್ಟಬೇಕು. 

ನೊಟೀಸ್ ನೀಡಲಾಗಿರುವ ಹಳೆಯ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು. ಅದನ್ನು ಸರ್ಕಾರ ವಸೂಲು ಮಾಡುವುದಿಲ್ಲ. ಆದರೆ ಅವರೆಲ್ಲರೂ ಕಡ್ಡಾಯವಾಗಿ ಜಿಎಸ್ಟಿ ನೋಂದಣಿ ಮಾಡಬೇಕು ಎಂದು ಮುಖ್ಯಮಂತ್ರಿ ಅವರು ಸ್ಪಷ್ಟಪಡಿಸಿದರು.

ವ್ಯಾಪಾರ ವಹಿವಾಟು ಬಂದ್ಗೆ ಯಾವುದೇ ಸಂಘಟನೆಗಳು ಬೆಂಬಲ ನೀಡಿಲ್ಲ ಎಂದು ಪ್ರತಿನಿಧಿಗಳು ಸ್ಪಷ್ಟಪಡಿಸಿದ್ದಾರೆ. ಈ ಕುರಿತಾಗಿ ನಡೆಸಲು ನಿರ್ಧರಿಸಿದ್ದ ಎಲ್ಲಾ ರೀತಿಯ ಪ್ರತಿಭಟನೆಗಳನ್ನು ಕೈಬಿಡಲಾಗುವುದು ಎಂದು ಸಂಘ ಸಂಸ್ಥೆಗಳ ಪ್ರತಿನಿಧಿಗಳು ತಿಳಿಸಿದರು.

Author

Arambh Suddi Kannada News True Newses And Stories Telecasting

Experienced journalist focused on global news, trends, and untold stories — with a commitment to accuracy and impact.

0/Post a Comment/Comments