ಚಾಮರಾಜನಗರ ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ತಕ್ಷಣವೇ ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ ಮಾಡುವ ಕುರಿತು ಜನಾಕ್ರೋಶದ ಮೂಲಕ ಪ್ರತಿಭಟನೆ!!!!!
www.Arambhsuddikannada.com,
ಚಾಮರಾಜನಗರ ಆರಂಭ ಸುದ್ದಿಕನ್ನಡ 01August 2025 ಜಿಲ್ಲಾ ಮಾದಿಗ ಸಮಾಜ ಒಳ ಮೀಸಲಾತಿ ಹೋರಾಟ ಒಕ್ಕೂಟದ ನೇತೃತ್ವದಲ್ಲಿ ಇಂದು ಜಿಲ್ಲಾಡಳಿತ ಭವನದ ಎದುರು ಭಾರಿ ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಧಿಕ್ಕಾರದ ಘೋಷಣೆ ಕೂಗುವ ಮೋಲಕ ಆಕ್ರೋಶ ಹೂರ ಹಾಕಿದ ಕಾರ್ಯಕರ್ತರು ಪರಿಶಿಷ್ಟ ಜಾತಿಗಳ ಸಮುದಾಯದೊಳಗಿನ ಅತೀ ಹಿಂದುಳಿದ ಮತ್ತು ಅವಕಾಶ ವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯವನ್ನು ಒದಗಿಸುವ ಸಲುವಾಗಿ ಜಾರಿಯಾಗಬೇಕಿರುವ ಒಳ ಮೀಸಲಾತಿಯ ಬೇಡಿಕೆ ಮತ್ತು ಹೋರಾಟ 35 ವರುಷಗಳಿಂದ ನನೆಗುದಿಗೆ ಬಿದ್ದಿದೆ ಈ ಅಸಮಾನತೆಯನ್ನು ಸರಿಪಡಿಸಲು, ಸರ್ವೋಚ್ಚ ನ್ಯಾಯಾಲಯದ ತೀರ್ಪು ಸ್ಪಷ್ಟವಾಗಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಸಮುದಾಯಗಳಿಗೂ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ನೀಡಲು ರಾಜ್ಯ ಸರ್ಕಾರಗಳಿಗೆ ಆದೇಶವನ್ನು ನೀಡಿದೆ ಆದರೆ ಕರ್ನಾಟಕ ಸರ್ಕಾರವು ಈ ಸರ್ವೋಚ್ಛ ನ್ಯಾಯಾಲಯದ ತೀರ್ಪುನ್ನು ಜಾರಿಗೊಳಿಸಲು ಆನಗತ್ಯವಾಗಿ ವಿಳಂಬ ಮಾಡುತ್ತಿರುವುದು ಸರಿಯಿಲ್ಲ ಎಂದು ಗುಡುಗಿದ ಮಾದಿಗ ಸಮುದಾಯದ ಕಾರ್ಯಕರ್ತರು ಸುಪ್ರೀಂಕೋರ್ಟ್ ತೀರ್ಪಿನ ತರುವಾಯ ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ ಸರ್ಕಾರಗಳು ತುರ್ತುara ನಿಗಾ ವಹಿಸಿ ತಮ್ಮ ರಾಜ್ಯಗಳಲ್ಲಿ ಒಳಮೀಸಲಾತಿಯನ್ನು ಜಾರಿ ಮಾಡಿ ಸಾಮಾಜಿಕ ನ್ಯಾಯದ ವಿಷಯದಲ್ಲಿ ಮೇಲ್ಪಂಕ್ತಿ ಆಗಿದ್ದಾರೆ ಆದರೆ ಕರ್ನಾಟಕ ಸರ್ಕಾರ ತೀವ್ರವಾದ ವಿಳಂಬ ನೀತಿ ಅನುಸರಿಸುತ್ತಿದ್ದು ಪರಿಶಿಷ್ಟ ಜಾತಿಗಳಲ್ಲಿ ಅದರಲ್ಲೂ ಮುಖ್ಯವಾಗಿ ಮಾದಿಗ ಮತ್ತು 29 ಉಪಜಾತಿಗಳಲ್ಲಿ ತೀವ್ರ ಜನಾಕ್ರೋಶಕ್ಕೆ ಕಾರಣವಾಗಿದೆ. ಎಂದು ಆಸಮಾಧಾನ ಹೊರಹಾಕಿದ್ದರು ಪ್ರತಿಭಟನೆಯಲ್ಲಿ ಅರಕಲವಾಡಿ ನಾಗೇಂದ್ರ. ಶಿವಕುಮಾರ. ಹೆಚ್ ಮೂರ್ತಿ. ಮಾದಪ್ಪ. ಮಹದೇವಯ್ಯ. ಶಿವಣ್ಣ ಕುಮಾರ ಸೇರಿದಂತೆ ಇನ್ನೀತರರು ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು... www.Arambhsuddikannada.com

Post a Comment