ಬೆಂಗಳೂರು ಆರಂಭ ಸುದ್ದಿ ಕನ್ನಡ August 26 2025 ರಾಜ್ಯ ಸರಕಾರವು 16 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಂಗಳವಾರ ಆದೇಶ ಹೊರಡಿಸಿದೆ!!!!
ಬೆಂಗಳೂರು ಆರಂಭ ಸುದ್ದಿ ಕನ್ನಡ August 26 2025 ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖ್ಯ ಆಡಳಿತಾಧಿಕಾರಿ ಡಾ.ಬಸಂತಿ ಬಿ.ಎಸ್. ಅವರನ್ನು ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ವಿಶೇಷ ಭೂ ಸ್ವಾಧೀನಾಧಿಕಾರಿ, ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಕೃಷ್ಣ ಕುಮಾರ್ ಎಂ.ಪಿ. ಅವರನ್ನು ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ, ಡಾ.ಕವಿತಾ ಯೋಗಪ್ಪನವರ್ ಅವರನ್ನು ರಾಜ್ಯ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.ದಾವಣಗೆರೆ ಜಿಲ್ಲೆಯ ರಾಜ್ಯ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ ವಿಶೇಷ ಭೂಸ್ವಾಧೀನಾಧಿಕಾರಿ ಮಾರುತಿ ಬಾಕೋಡ ಅವರನ್ನು ಬಾಗಲಕೋಟೆಯ ನವನಗರ ಕೃಷ್ಣ ಮೇಲ್ದಂಡೆ ಯೋಜನೆಯ ವಿಶೇಷ ಜಿಲ್ಲಾಧಿಕಾರಿಯಾಗಿ ವರ್ಗಾವಣೆ
ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಶೇಕ್ ಲತೀಫ್ ಅವರನ್ನು ಆಯುಷ್ ಇಲಾಖೆಯ ಮುಖ್ಯ ಆಡಳಿತಾಧಿಕಾರಿ, ರೂಪಾ ಆರ್. ಅವರನ್ನು ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ, ಸರೋಜಾ ಬಿ.ಬಿ. ಅವರನ್ನು ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ, ಬಳ್ಳಾರಿಯ ಜಿಲ್ಲಾ ಖಜಿನ ಪ್ರತಿಷ್ಠಾನದ ವಿಶೇಷ ಅಧಿಕಾರಿ ಮಂಜುನಾಥ್ ಪಿ.ಎಸ್. ಅವರನ್ನು ಬಳ್ಳಾರಿ ಮಹಾನಗರ ಪಾಲಿಕೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ
ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಕಮಲಾ ಬಾಯಿ ಬಿ. ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಬೆಂಗಳೂರು ಬ್ಯುಸಿನಸ್ ಕಾರಿಡಾರ್(ಪಿಪಿಆರ್)ನ ವಿಶೇಷ ಭೂಸ್ವಾಧೀನಾಧಿಕಾರಿ-5, ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನದ ಹೆಚ್ಚುವರಿ ಮಿಷನ್ ನಿರ್ದೇಶಕ ಅರ್ಜುನ್ ಒಡೆಯರ್ ಅವರನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲ ಸಚಿವರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಡಾ.ಶೃತಿ ಎಂ.ಕೆ. ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಬೆಂಗಳೂರು ಬ್ಯುಸಿನಸ್ ಕಾರಿಡಾರ್(ಪಿಪಿಆರ್)ನ ವಿಶೇಷ ಭೂಸ್ವಾಧೀನಾಧಿಕಾರಿ-1, ಪ್ರಮೋದ್ ಎಲ್.ಪಾಟೀಲ್ ಅವರನ್ನು ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಪ್ರಧಾನ ವ್ಯವಸ್ಥಾಪಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಕಾಂತರಾಜ ಕೆ.ಜೆ. ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಬೆಂಗಳೂರು ಬ್ಯುಸಿನಸ್ ಕಾರಿಡಾರ್(ಪಿಪಿಆರ್)ನ ವಿಶೇಷ ಭೂಸ್ವಾಧೀನಾಧಿಕಾರಿ-4, ಅಪೂರ್ವ ಬಿದರಿ ಅವರನ್ನು ರಾಜ್ಯ ಮೇಲ್ಮನವಿ ನ್ಯಾಯಾಧೀಕರಣದ ರಾಜ್ಯ ಪ್ರತಿನಿಧಿ-1, ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಪ್ರಧಾನ ವ್ಯವಸ್ಥಾಪಕ ನಿತಿನ್ ಚಕ್ಕಿ ಅವರನ್ನು ಕೊಡಗು ಜಿಲ್ಲೆಯ ಮಡಿಕೇರಿ ಉಪ ವಿಭಾಗದ ಉಪ ವಿಭಾಗಾಧಿಕಾರಿ ಹಾಗೂ ಹಾಸನ ಜಿಲ್ಲೆಯ ಹಾಸನ ಉಪ ವಿಭಾಗದ ಉಪ ವಿಭಾಗಾಧಿಕಾರಿ ಮಾರುತಿ ಜೆ.ಬಿ. ಅವರನ್ನು ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಉಪ ಮುಖ್ಯ ಕಾರ್ಯನಿರ್ವಹಣಾಧಿಕಾರಿ(ಆಡಳಿತ ಮತ್ತು ವಸೂಲಿ)ಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೇ... www.arambhsuddikannada.com
Post a Comment