ಬೀದರ್ ಆರಂಭ ಸುದ್ದಿ ಕನ್ನಡ ಆಗಸ್ಟ್
30 ಜಿಲ್ಲಾದ್ಯಂತ ಕಳೆದ ನಾಲ್ಕು ದಿನಗಳಿಂದ ಮಳೆ ಆಗುತ್ತಿದ್ದು, ಆ.27 ಹಾಗೂ ಆ.28ರಂದು ಜಿಲ್ಲೆಯಾದ್ಯಂತ 59 ಎಂ.ಎಂ ಮಳೆಯಾಗಿದ್ದು, ಭಾರಿ ಮಳೆಯಿಂದ ಜಿಲ್ಲೆಯಲ್ಲಿ 66,906 ಹೆಕ್ಟೇರ್ ಬೆಳೆ ಹಾನಿಯಾಗಿದೆ ಈಶ್ವರ್ ಖಂಡ್ರೆ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದ ನೈಋತ್ಯ ಮುಂಗಾರು ಹಂಗಾಮಿನಲ್ಲಿ ವಾಡಿಕೆ 466 ಎಂಎ ಮಳೆಯಾಗಬೇಕಾಗಿದ್ದು 467 ಎಂಎಂ ಮಳೆಯಾಗಿದೆ ಕಳೆದ 24 ಗಂಟೆಯಲ್ಲಿ ಜಿಲ್ಲೆಯಾದ್ಯಂತ 59 ಎಂಎಂ ಮಳೆಯಾಗಿದೆ ಇನ್ನು ಆಗಸ್ಟ್ ತಿಂಗಳಲ್ಲಿ ಅತಿ ಹೆಚ್ಚು ಔರಾದ್, ಕಮಲನಗರ ಹಾಗೂ ಭಾಲ್ಕಿ ತಾಲೂಕುಗಳಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆ ಸುರಿಯಿತು.
ಎರಡು ದಿನಗಳ ಸತತ ಸುರಿದ ಮಳೆಯಿಂದ ಜಿಲ್ಲೆಯಾದ್ಯಂತ 94 ಮನೆ 70 ಕೀ.ಮೀ. ರಸ್ತೆ, 47 ಬ್ರಿಡ್ಜ್ 1,335 ಶಾಲಾ ಕೊಠಡಿಗಳಿಗೆ ಹಾನಿಯಾಗಿದೆ. ಇನ್ನು 138 ವಿದ್ಯುತ್ ಕಂಬ, 21 ಟ್ರಾನ್ಸ್‌ಫಾರ್ಮರ್ ವಿದ್ಯುತ್ ತಂತಿ ಸೇರಿಂದತೆ ಸಣ್ಣನೀರಾವರಿಇಲಾಖೆಯ38ಕೆರೆಗಳುಹಾನಿಗೀಡಾಗಿದ್ದು, ಸಮೀಕ್ಷೆ ಕಾರ್ಯ ಮುಂದುವರೆದಿದೆʼ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ ಮೂರು ತಿಂಗಳಲ್ಲಿ 79 ಸಾವಿರ ಹೆಕ್ಟೇರ್ ಬೆಳೆ ಹಾನಿ ಬೀದರ್ ಜಿಲ್ಲೆಯಾದ್ಯಂತ ಪೂರ್ವ ಮುಂಗಾರು ಪೂರ್ವ ಹಾಗೂ ಮುಂಗಾರು ಆರಂಭವಾದ ಬಳಿಕ ಜೂನ್ ತಿಂಗಳಿಂದ ಆಗಸ್ಟ್ 28 ರವರೆಗೆ ಸುರಿದ ವ್ಯಾಪಕ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಇಲ್ಲಿಯವರೆಗೆ ಕೃಷಿ ಹಾಗೂ ತೋಟಗಾರಿಕೆ ಸೇರಿ ಒಟ್ಟು 79,443 ಹೆಕ್ಟೇರ್ ಬೆಳೆ ಹಾನಿಯಾಗಿದ್ದು ಸಮೀಕ್ಷೆಯಿಂದ ತಿಳಿದು ಬಂದಿದೆ. ಆದರೆ, ಪ್ರಾಥಮಿಕ ಮಾಹಿತಿ ಪ್ರಕಾರ ಸುಮಾರರು ಒಂದು ಲಕ್ಷ ಹೆಕ್ಟೇರ್‌ಗೂ ಅಧಿಕ ಬೆಳೆ ಹಾನಿಯಾಗಿರುವ ಸಾಧ್ಯತೆ ಇದೆ ಜಿಲ್ಲಾ ನಲ್ಲಿ ಭಾರಿ ಮಳೆಯಿಂದಾಗಿ ಹೆಸರು, ಉದ್ದು, ತೊಗರಿ ಹಾಗೂ ಸೋಯಾಬೀನ್ ಬೆಳೆಗಳು ಸಂಪೂರ್ಣವಾಗಿ ಹಾನಿಗೊಳಗಾಗಿದ್ದು ಹಲವೆಡೆ ಮನೆಗಳುನು ಕುಸಿತಗೊಂಡಿರುವುದರಿಂದ ಗ್ರಾಮಸ್ಥರು ಸಂಕಷ್ಟ ಅನುಭವಿಸುತ್ತಿದ್ದಾರೆ ಈ ಹಿನ್ನೆಲೆಯಲ್ಲಿ ಸಚಿವರು ಸ್ಥಳೀಯರ ಸಮಸ್ಯೆಗಳನ್ನು ಆಲಿಸಿ ಶೀಘ್ರದಲ್ಲೇ ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ವನು ಒದಗಿಸಲಾಗುವುದು ಎಂದು ಭರವಸೆ ನೀಡಿದರು
ಬೀದರ್ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳ ಅತಿವೃಷ್ಟಿ ಪ್ರದೇಶಗಳಿಗೆ ಸಚಿವ ರಹೀಂ ಖಾನ್ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು ಅವರು
ನಂತರ ಕಾರಂಜಾ ಜಲಾಶಯಕ್ಕೆ ಭೇಟಿ ನೀಡಿದ ಸಚಿವರು, ಜಲಾಶಯದ ಸ್ಥಿತಿಗತಿ ಕುರಿತು ವೀಕ್ಷಿಸಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು ಪ್ರಸ್ತುತ 7 ಟಿಎಂಸಿ ಸಾಮರ್ಥ್ಯದ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು 10 ಸಾವಿರ ಕ್ಯೂಸೆಕ್ ನೀರು ಒಳಹರಿವು ಆಗುತ್ತಿದ್ದು 13 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು ಜಿಲ್ಲೆಯಲ್ಲಿ ಒಟ್ಟು 4.21 ಲಕ್ಷ ಹೆಕ್ಟೇರ್ ಬಿತ್ತನೆಯಾಗಿದೆ. ಅದರಲ್ಲಿ ಉದ್ದು 15,850 ಹೆಕ್ಟೇರ್, ಹೆಸರು 21,850 ಹೆಕ್ಟೇರ್ ತೊಗರಿ-1,17,450 ಹೆಕ್ಟೇರ್ ಹಾಗೂ ಸೋಯಾಅವರೆ-1,99916 ಹೆಕ್ಟೇರ್ ಸೇರಿದಂತೆ ಇತರೆ ಬೆಳೆ ಬಿತ್ತನೆಯಾಗಿದೆ ಅಧಿಕ ಮಳೆಯಿಂದ ಹೆಸರು, ಉದ್ದು ಹಾಗೂ ತೊಗರಿ ಬೆಳೆಗೆ ಹೆಚ್ಚು ಹಾನಿಯಾಗಿದೆ www.arambhsuddikannadacom
Post a Comment