ಬೀದರ್ ಜಿಲ್ಲೆ ಔರಾದ್ ತಾಲೂಕಿನ ಧುಡುಕನಾಳ, ಮಾನೂರನಲ್ಲಿ ಬೆಳೆ ಹಾನಿಪರಿಶೀಲನೆ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಶಾಸಕ ಪ್ರಭು ಚವ್ಹಾಣ!!!!
www.arambhsuddikannada.comಬೀದರ್ ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಔರಾದ(ಬಿ) ತಾಲ್ಲೂಕಿನ ಧುಡುಕನಾಳ ಹಾಗೂ ಮಾನೂರ ಗ್ರಾಮಗಳ ವ್ಯಾಪ್ತಿಯಲ್ಲಿ ಆ.24ರಂದು ಸಂಚರಿಸಿ ಮಳೆಯಿಂದ ಉಂಟಾಗಿರುವ ಬೆಳೆ ಹಾನಿಯನ್ನು ಪರಿಶೀಲಿಸಿ ರೈತರ ಸಮಸ್ಯೆಗಳನ್ನು ಆಲಿಸಿದರು
ಬೆಳೆ ಹಾನಿ ಸಮೀಕ್ಷೆ ಕುರಿತು ರೈತರು ತೀವ್ರ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಅಧಿಕಾರಿಗಳು ಎಲ್ಲ ಕೃಷಿ ಭೂಮಿಗಳಿಗೆ ಓಡಾಡುವುದಿಲ್ಲವೆಂದು ದೂರು ಹೇಳುತ್ತಿದ್ದಾರೆ. ಈ ಬಾರಿ ಹೀಗಾಗಬಾರದು ಸಮೀಕ್ಷಾ ಕಾರ್ಯದ ಜವಾಬ್ದಾರಿ ವಹಿಸಿರುವ ಕಂದಾಯ, ಕೃಷಿ, ತೋಟಗಾರಿಕೆ ಸೇರಿದಂತೆ ಎಲ್ಲ ಅಧಿಕಾರಿಗಳು ತಪ್ಪದೇ ಬೆಳೆಹಾನಿಯಾದ ಕೃಷಿ ಭೂಮಿಗಳಿಗೆ ಹೋಗಿ ವಾಸ್ತವ ಪರಿಸ್ಥಿತಿಯನ್ನು ವರದಿ ಮಾಡಬೇಕೆಂದು ತಿಳಿಸಿದರು.
ಧುಡುಕನಾಳ ಸೇತುವೆ ನಿರ್ಮಾಣ ಕೆಲಸ ಸ್ಥಗಿತಗೊಂಡ ಕಾರಣದಿಂದಾಗಿ ಪಕ್ಕದಲ್ಲಿ ನಿರ್ಮಿಸಿದ್ದ ತಾತ್ಕಾಲಿಕ ಸೇತುವೆ ಮಳೆಯಿಂದ ಕೊಚ್ಚಿಕೊಂಡು ಹೋಗಿದ್ದು, ಯಾವುದೇ ವಾಹನಗಳು ಗ್ರಾಮಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ನಮ್ಮ ಊರಿನ ವಿದ್ಯಾರ್ಥಿಗಳು, ಔರಾದ(ಬಿ), ಎಕಂಬಾ ಹಾಗೂ ಮತ್ತಿತರೆ ಕಡೆ ಶಾಲೆ-ಕಾಲೇಜುಗಳಿಗೆ ಹೋಗುತ್ತಾರೆ. ಸದ್ಯಕ್ಕೆ ರಸ್ತೆ ಸಂಪರ್ಕ ಕಡಿತಗೊಂಡಿರುವುದರಿAದ ಗ್ರಾಮಕ್ಕೆ ಬಸ್‌ಗಳು ಬರುತ್ತಿಲ್ಲ. ಹಾಗಾಗಿ ವಿದ್ಯಾರ್ಥಿಗಳು ಶಾಲೆ-ಕಾಲೇಜುಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲವೆಂದು ಗ್ರಾಮಸ್ಥರು ಶಾಸಕರೆದು ತಮ್ಮ ಅಳಲನ್ನು ತೋಡಿಕೊಂಡರು. ಈ ವೇಳೆ ಸಂಬAಧಪಟ್ಟ ಅಧಿಕಾರಿಗಳನ್ನು ದೂರವಾಣಿ ಮುಖಾಂತರ ಸಂಪರ್ಕಿಸಿ ಸಮಸ್ಯೆ ಇತ್ಯರ್ಥಪಡಿಸುವಂತೆ ಸೂಚಿಸಿದರು. ಇದೇ ವೇಳೆ ಕೆಎಸ್‌ಆರ್‌ಟಿಸಿ ಡಿಪೋ ವ್ಯವಸ್ಥಾಪಕರನ್ನು ಸಂಪರ್ಕಿಸಿ ಪರ್ಯಾಯ ಮಾರ್ಗದ ಮೂಲಕ ಧುಡಕನಾಳ ಗ್ರಾಮಕ್ಕೆ ಬಸ್ ಸಂಚಾರ ಕೂಡಲೇ ಆರಂಭಿಸುವAತೆ ನಿರ್ದೇಶನ ನೀಡಿದರು.
ಮಹಾರಾಷ್ಟçದ ದೇಗಲೂರ ತಾಲ್ಲೂಕಿನಲ್ಲಿ ಬರುವ ಯೆಡೂರ ಕೆರೆಯಲ್ಲಿ ಉಂಟಾಗಿರುವ ಸಮಸ್ಯೆಯಿಂದಾಗಿ ಅಲ್ಲಿನ ನೀರು ಮಹಾರಾಷ್ಟç- ಕರ್ನಾಟಕ ಗಡಿಯಲ್ಲಿರುವ ಮಾನೂರ(ಕೆ) ಗ್ರಾಮದ ವ್ಯಾಪ್ತಿಯಲ್ಲಿನ ಕೃಷಿ ಭೂಮಿಗಳಿಗೆ ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಬೆಳೆದು ನಿಂತಿದ್ದ ಹತ್ತಿ, ತೊಗರಿ, ಉದ್ದು, ಹೆಸರು, ಸೋಯಾಬೀನ್ ಬೆಳೆಗಳು ಮುಳುಗಡೆಯಾಗಿವೆ ಎಂದು ರೈತರು ಶಾಸಕರೆದುರು ಸಮಸ್ಯೆ ಹಂಚಿಕೊAಡರು.ಬೆಳೆ ಹಾನಿಯನ್ನು ವೀಕ್ಷಿಸಬೇಕು. ಮತ್ತು ರೈತರ ಸಮಸ್ಯೆಗಳನ್ನು ಆಲಿಸಬೇಕು ಎಂಬ ಉದ್ದೇಶದಿಂದಲೇ ಹಾನಿ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದೇನೆ. ಈಗಾಗಲೇ ಕ್ಷೇತ್ರದಲ್ಲಿ ಸಂಚರಿಸಿ ಮಾಹಿತಿಯನ್ನು ಪಡೆದಿದ್ದೇನೆ. ಈ ಕುರಿತಂತೆ ಮುಖ್ಯಮಂತ್ರಿಗಳು ಮತ್ತು ಸಂಭಂದಪಟ್ಟ ಸಚಿವರನ್ನು ಭೇಟಿಯಾಗಿದ್ದು, ಅಧಿವೇಶನದಲ್ಲಿಯೂ ವಿಷಯ ಪ್ರಸ್ತಾಪಿಸಿದ್ದೇನೆ. ನಾನು ರೈತರ ಜೊತೆಗಿದ್ದೇನೆ. ಬೆಳೆ ಹಾನಿಯಾದ ರೈತರಿಗೆ ಪರಿಹಾರ ಕೊಡಿಸುವ ವರೆಗೂ ಸುಮ್ಮನಿರುವುದಿಲ್ಲ. ರೈತರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗದಿರಿ ಎಂದು ಧೈರ್ಯ ತುಂಬಿದರು ನಂತರ ನಾಂದೇಡ ಜಿಲ್ಲಾಧಿಕಾರಿಗಳನ್ನು ದೂರವಾಣಿ ಮುಖಾಂತರ ಸಂಪರ್ಕಿಸಿ, ಮಹಾರಾಷ್ಟç-ಕರ್ನಾಟಕ ಗಡಿಯಲ್ಲಿರುವ ಯೆಡೂರ ಕೆರೆಯಲ್ಲಿನ ಸಮಸ್ಯೆಯಿಂದಾಗಿ ಅಲ್ಲಿನ ನೀರು ಮಾನೂರ ಗ್ರಾಮದ ಕೃಷಿ ಭೂಮಿಗಳಿಗೆ ನುಗ್ಗಿ ಸಾಕಷ್ಟು ಬೆಳೆ ಹಾನಿಯಾಗಿದೆ. ಪ್ರತಿ ಮಳೆಗಾದಲ್ಲಿಯೂ ಈ ರೀತಿಯ ಸಮಸ್ಯೆ ಪುನರಾವರ್ತನೆಯಾಗುತ್ತಿದ್ದು, ಕೂಡಲೇ ಸರಿಪಡಿಸಿ ರೈತರಿಗೆ ಆಗುತ್ತಿರುವ ನಷ್ಟವನ್ನು ತಪ್ಪಿಸಬೇಕು ಎಂದು ತಿಳಿಸಿದರು.
ಸ್ಚ್ಛತೆ ನಿರ್ಲಕ್ಷ್ಯ-ಅಧಿಕಾರಿಗಳಿಗೆ ತರಾಟೆ:* ಧುಡುಕನಾಳ ಗ್ರಾಮದಲ್ಲಿ ಸ್ವಚ್ಛತಾ ಕಾರ್ಯ ಸರಿಯಾಗಿ ನಡೆಯುತ್ತಿಲ್ಲ. ಚರಂಡಿಗಳು ತುಂಬಿ ಹರಿಯುತ್ತಿವೆ ಎಂದು ಗ್ರಾಮಸ್ಥರು ಶಾಸಕರ ಗಮನಕ್ಕೆ ತಂದಾಗ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಕೆಲಸ ಮಾಡಲು ಇಷ್ಟವಿದ್ದರೆ ಸರಿಯಾಗಿ ಕೆಲಸ ಮಾಡಿ, ಗ್ರಾಮದ ಸ್ವಚ್ಛತೆಗೆ ಆದ್ಯತೆ ಕೊಡಿ ಇಲ್ಲವೆಂದರೆ ಕೆಲಸ ಬಿಟ್ಟು ಹೋಗಿ ಎಂದು ಖಾರವಾಗಿ ಎಚ್ಚರಿಸಿದರು.
ಈ ಸಂದರ್ಭದಲ್ಲಿ ತಹಸೀಲ್ದಾರರಾದ ಮಹೇಶ ಪಾಟೀಲ, ತಾಲ್ಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾದ ಶಿವಕುಮಾರ ಘಾಟೆ, ಪಂಚಾಯತ್ ರಾಜ್ ಇಂಜಿನೀಯರಿAಗ್ ವಿಭಾಗದ ಎಇಇ ಸುನೀಲ ಚಿಲ್ಲರ್ಗೆ, ಸಣ್ಣ ನೀರಾವರಿ ಇಲಾಖೆಯ ಸಂಗಮೇಶ, ಮುಖಂಡರಾದ ರಾಮಶೆಟ್ಟಿ ಪನ್ನಾಳೆ, ಶಿವಾಜಿರಾವ ಪಾಟೀಲ ಮುಂಗನಾಳ, ಧೊಂಡಿಬಾ ನರೋಟೆ, ಶಿವರಾಜ ಅಲ್ಮಾಜೆ, ಪ್ರವೀಣ ಕಾರಬಾರಿ, ಯಾದು ಸಗರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು... www.ಆರಂಭಸುದ್ಧಿಕನ್ನಡ. com
Post a Comment