ಬೀದರ್ ಕಾರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ ಒಬ್ಬ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ!!!!
ಬೀದರ್ ಆರಂಭ ಸುದ್ದಿ ಕನ್ನಡ 04-ಆಗಸ್ಟ್ 25ಜನವಾಡ ಬೀದರ್-ಔರಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಭಾನುವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಜನವಾಡ ಗ್ರಾಮದ ಬಳಿ ಬೈಕ್ ಮತ್ತು ಕಾರು ಡಿಕ್ಕಿ ಹೊಡೆದ ಪರಿಣಾಮ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಜನವಾಡ ಗ್ರಾಮದ ಉಮೇಶ್ ಕಾಂಬ್ಳೆ (40) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡ ದಿಲೀಪ್ ಅವರನ್ನು ಬೀದರ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಹೈದರಾಬಾದ್‌ನಿಂದ ಔರಾದ್‌ಗೆ ಅತಿ ವೇಗವಾಗಿ ಹೋಗುತ್ತಿದ್ದ ತೆಲಂಗಾಣದ ಕಾರು ರಸ್ತೆಯ ಬದಿಯಲ್ಲಿ ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ, ಬೈಕ್ ಸವಾರ ಐದರಿಂದ ಆರು ಅಡಿ ದೂರಕ್ಕೆ ಹಾರಿ ಬಿದ್ದಿದ್ದಾನೆ. ಅಪಘಾತದ ಭಯಾನಕ ದೃಶ್ಯವು ಅಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಕಾರು ಚಾಲಕ ಮತ್ತು ಕಾರಿನಲ್ಲಿದ್ದ ಇತರರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಘಟನೆಯ ನಂತರ ಎಲ್ಲರೂ ಕಾರಿನಿಂದ ಇಳಿದು ಪರಾರಿಯಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಜನವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Post a Comment