ಆರಂಭ ಸುದ್ದಿ ಕನ್ನಡ
ಬೀದರ್ ಆರಂಭ ಸುದ್ದಿ ಕನ್ನಡ ಆ 30 ವಿಧಾನಸಭಾ ಉತ್ತರ ಕ್ಷೇತ್ರದ ವಿವಿಧ ಗ್ರಾಮಗಳ ಅತಿವೃಷ್ಟಿ ಪ್ರದೇಶಗಳಿಗೆ ಸಚಿವ ರಹೀಂ ಖಾನ್ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು ಭಾರಿ ಮಳೆಯಿಂದಾಗಿ ಹೆಸರು, ಉದ್ದು, ತೊಗರಿ ಹಾಗೂ ಸೋಯಾಬೀನ್ ಬೆಳೆಗಳು ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, ಹಲವೆಡೆ ಮನೆಗಳು ಕುಸಿತಗೊಂಡಿರುವುದರಿಂದ ಗ್ರಾಮಸ್ಥರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವರು ಸ್ಥಳೀಯರ ಸಮಸ್ಯೆಗಳನ್ನು ಆಲಿಸಿ ಶೀಘ್ರದಲ್ಲೇ ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು ನಂತರ ಕಾರಂಜಾ ಜಲಾಶಯಕ್ಕೆ ಭೇಟಿ ನೀಡಿದ ಸಚಿವರು ಜಲಾಶಯದ ಸ್ಥಿತಿಗತಿ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು ಪ್ರಸ್ತುತ 7 ಟಿಎಂಸಿ ಸಾಮರ್ಥ್ಯದ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, 10 ಸಾವಿರ ಕ್ಯೂಸೆಕ್ ನೀರು ಒಳಹರಿವು ಆಗುತ್ತಿದ್ದು 13 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು ಸಚಿವ ರಹೀಂ ಖಾನ್ ಬೆಳೆ ಹಾನಿ ವೀಕ್ಷಣೆ ಪೌರಾಡಳಿತ ಮತ್ತು ಹಜ್ ಖಾತೆ ಸಚಿವ ಬೀದರ್ ಉತ್ತರ ಕ್ಷೇತ್ರದ ಶಾಸಕರೂ ಆದ ರಹೀಂ ಖಾನ್ ಅವರು ಶುಕ್ರವಾರ ಬೀದರ ತಾಲ್ಲೂಕಿನ ವಿಲಾಸಪುರ, ರಾಜನಾಳ, ಅಲಿಯಂಬರ್, ಜನವಾಡ, ಚಾಂಬೋಳ್ ಹಾಗೂ ಶ್ರೀಮಂಡಲ ಗ್ರಾಮಗಳ ಅತಿವೃಷ್ಟಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಪ್ರತಿಯೊಂದು ವಿಪತ್ತು ಮತ್ತು ಹಾನಿಯ ವರದಿ ಮಾಡಲು ಮತ್ತು ರೈತರಿಗೆ ಸಕಾಲದಲ್ಲಿ ಪರಿಹಾರ ನೀಡಲು ಅಂತರ ಇಲಾಖಾ ಸಮೀಕ್ಷೆಯನ್ನು ಮಾಡಲು ಅಧಿಕಾರಿಗಳ ನಿರ್ದೇಶನ ಮಾಡಿದರು, www.arambhsuddikannada.com
Post a Comment