ಯಾದಗಿರಿ ಜಿಲ್ಲೆಯ ಶಹಾಪುರದ ವಸತಿ ಶಾಲೆಯ ಶೌಚಾಲಯದಲ್ಲೇ ಬಾಲಕಿಗೆ ಹೆರಿಗೆ!!!
ᴡᴡᴡ. ᴀʀᴀᴍʙʜꜱᴜᴅᴅɪᴋᴀɴɴᴀᴅᴀ. ᴄᴏᴍ.ಯಾದಗಿರಿ Yadgir District Shahpur Taluka Residential school ಆರಂಭ ಸುದ್ದಿ ಕನ್ನಡ 28 ಆಗಸ್ಟ್ 2025 ಜಿಲ್ಲೆಯ ಶಹಾಪುರದ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿಗೆ ಹೆರಿಗೆಯಾಗಿದೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಈ ಘಟನೆಯ ಬಗ್ಗೆ ಸ್ವಯಂಪ್ರೇರಿತ ದೂರನ್ನು ದಾಖಲಿಸಿದೆ ವಸತಿ ಶಾಲೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ ತನಿಖೆ ನಡೆಯುತ್ತಿದೆ
ಬುಧವಾರ ಮಧ್ಯಾಹ್ನ 2:30ರ ಸಮಾರಿಗೆ ವಸತಿ ನಿಲಯದ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ಹೆರಿಗೆಯಾಗಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ವರದಿಯಾಗಿದೆ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ದೂರು ದಾಖಲಿಸಿಕೊಳ್ಳಬೇಕು ಹಾಗೂ ಘಟನೆ ಸಂಬಂಧ ತನಿಖೆ ನಡೆಸಿ ವಿಸ್ತೃತವಾದ ವರದಿ ನೀಡಬೇಕೆಂದು ಡಿಸಿಪಿ ಅವರಿಗೆ ಸೂಚನೆ ನೀಡಿದ್ದೇನೆ ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೋಸಂಬೆ ಹೇಳಿದರು
ವಿದ್ಯಾರ್ಥಿನಿಯ ದೈಹಿಕ ಬದಲಾವಣೆಯಾದ ಸಂದರ್ಭದಲ್ಲಿ ವಸತಿ ನಿಲಯದ ಸಿಬ್ಬಂದಿ ಆಕೆಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಬೇಕಿತ್ತ್ತು ಸಮಾಜ ಕಲ್ಯಾಣ ಇಲಾಖೆ ಸುತ್ತೋಲೆ ಪ್ರಕಾರ ವಸತಿ ನಿಲಯದ ಸಿಬ್ಬಂದಿ ಎಲ್ಲ ಮಕ್ಕಳ ವೈದ್ಯಕೀಯ ಪರೀಕ್ಷೆ ತಿಂಗಳಿಗೆ ಒಮ್ಮೆ ಪರಿಶೀಲಿಸಬೇಕಿತ್ತು. ಆದರೆ, ಸಿಬ್ಬಂದಿಗಳು ಆರೋಗ್ಯ ಪರೀಕ್ಷೆ ಮಾಡದೆ ಎಡವಿದ್ದಾರೆ. ಹೀಗಾಗಿ, ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಅಲ್ಲಿನ ಸಿಬ್ಬಂದಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡುತ್ತೇನೆ ಎಂದರು ಈ ಸುದ್ದಿ ಸೋಶಿಯಲ್ ಮೀಡಿಯಾ ನಲ್ಲಿ ವೈರಲ್ ಆಗ್ತಾ ಇದೆ www.arambhsuddikannada.com
Post a Comment