ಬಗದಲ್ ಸರಕಾರಿ ಶಾಲಾ ಛಾವಣಿ ಕುಸಿದ ವಿದ್ಯಾರ್ಥಿಗೆ ಗಾಯ,ಚಿಕಿತ್ಸಾ ವೆಚ್ಚ ಭರಿಸಲು ಆದೇಶದು ಸ್ಥಿತಿಯಲ್ಲಿರುವ ಶಾಲೆಗಳವಿವರ ನೀಡಲು ಈಶ್ವರ ಖಂಡ್ರೆ ಸೂಚನೆ!!!!!
WWW.ARAMBHSUDDIKANNADA.COMಬೆಂಗಳೂರು, ಆ.9: ಆರಂಭ ಸುದ್ದಿ ಕನ್ನಡ ಬೀದರ್ ಜಿಲ್ಲೆಯ ಬಗದಲ್ ಗ್ರಾಮದಲ್ಲಿ ಶಾಲಾ ಮೇಲ್ಚಾವಣಿ ಕುಸಿದು ವಿದ್ಯಾರ್ಥಿಗೆ ಗಾಯವಾಗಿರುವ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ, ಗಾಯಾಳು ವಿದ್ಯಾರ್ಥಿ ಶೀಘ್ರ ಗುಣಮುಖನಾಗಲಿ ಎಂದು ಹಾರೈಸಿದ್ದು, ಚಿಕಿತ್ಸಾ ವೆಚ್ಛ ಭರಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.
ಶಿಥಿಲಾವಸ್ಥೆಯಲ್ಲಿರುವ ಹಾಗೂ ಅಪಾಯಕಾರಿ ಕೊಠಡಿಯಲ್ಲಿ ಪಾಠ ಪ್ರವಚನ ನಡೆಸದಂತೆ ಈ ಹಿಂದೆಯೇ ಸ್ಪಷ್ಟ ಸೂಚನೆ ನೀಡಿದ್ದರೂ ನಿರ್ಲಕ್ಷ್ಯ ವಹಿಸಿರುವ ಬಗ್ಗೆ ತನಿಖೆ ನಡೆಸಿ, ಶಾಲೆಯ ಮುಖ್ಯಸ್ಥರ ವಿರುದ್ಧ ಕ್ರಮದ ಶಿಫಾರಸಿನೊಂದಿಗೆ ವರದಿ ಸಲ್ಲಿಸಲು ನಿರ್ದೇಶಿಸಿದ್ದಾರೆ.
ಈ ಘಟನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಶಾಲಾ ಕಟ್ಟಡಗಳ ದುಸ್ಥಿತಿಯ ಕುರಿತಂತೆ ಪರಿಶೀಲನೆ ನಡೆಸುವಂತೆ ಮತ್ತು ದುರಸ್ಥಿತಿಗೆ ತುರ್ತು ಕ್ರಮ ಕೈಗೊಳ್ಳುವಂತೆ ಈ ಹಿಂದೆ ಅನೇಕ ಬಾರಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಕಳೆಡ ಆಗಸ್ಟ್ 2ರಂದು ನಡೆದ ಕೆ.ಡಿ.ಪಿ. ಸಭೆಯಲ್ಲಿ ಕೂಡ ಶಿಥಿಲಾವಸ್ಥೆಯಲ್ಲಿರುವ ಎಲ್ಲ ಶಾಲಾ ಕಟ್ಟಡಗಳ ಪರಿಶೀಲನೆ ನಡೆಸಿ ವರದಿ ನೀಡುವಂತೆ ಶಿಕ್ಷಣ ಇಲಾಖೆಗೂ ಸೂಚಿಸಲಾಗಿತ್ತು. ಆದರೂ ಈ ಘಟನೆ ನಡೆದಿದೆ. ಹಾಗೂ ಅಧಿಕಾರಿಗಳು ವಿದ್ಯಾರ್ಥಿಗಳ ಸುರಕ್ಷತೆಗೆ ಗಮನ ಹರಿಸಬೇಕು ಎಂದು ಸೂಚಿಸಿದ್ದಾರೆ.
ವಿದ್ಯಾರ್ಥಿಗಳು ಮತ್ತು ಬೋಧಕರ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲೆಯ ಎಲ್ಲ ಸರ್ಕಾರಿ ಶಾಲೆ ಮತ್ತು ಕಾಲೇಜು ಕಟ್ಟಡಗಳ ಸ್ಥಿತಿ ಮತ್ತು ಯಾವ ಶಾಲೆಯ ಕೊಠಡಿ ಶಿಥಿಲವಾಗಿದೆ, ಅದನ್ನು ದುರಸ್ತಿ ಮಾಡಬಹುದೇ ಅಥವಾ ಒಡೆದು ಕಟ್ಟಬೇಕೆ ಎಂಬ ಬಗ್ಗೆ 10 ದಿನಗಳ ಒಳಗಾಗಿ ಸ್ಪಷ್ಟ ಮಾಹಿತಿಯೊಂದಿಗೆ ಪ್ರಸ್ತಾವನೆಯನ್ನು ಕಡತದಲ್ಲಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಈಶ್ವರ ಖಂಡ್ರೆ ಸೂಚಿಸಿದ್ದಾರೆ ಮುಂದುವರಿದು, ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಯಾವ ವರ್ಷ ಕಟ್ಟಲಾಗಿದೆ, ಅದಕ್ಕೆ ಮಾಡಿರುವ ವೆಚ್ಚ ಎಷ್ಟು, ಇಷ್ಟು ಬೇಗ ಶಿಥಿಲಾವಸ್ಥೆಗೆ ಹೋಗಲು ಕಾರಣವೇನು ಎಂಬ ಬಗ್ಗೆ ಪರಿಶೀಲನಾ ವರದಿಯನ್ನು ಸಲ್ಲಿಸುವಂತೆಯೂ ಅವರು ತಿಳಿಸಿದ್ದಾರೆ,
WWW.ARAMBHSUDDIKANNADA.COM

Post a Comment