𝗔𝗥𝗔𝗠𝗕𝗛 𝗦𝗨𝗗𝗗𝗜 𝗞𝗔𝗡𝗡𝗔𝗗𝗔

ಸಮಾಜದಲ್ಲಿ ಅಸಮಾನತೆ ಇರುವುದು ಬಹುಸಂಖ್ಯಾತ ಜನರು ಶಿಕ್ಷಣದಿಂದ ವಂಚಿತರಾದರು ಎಂಬ ಕಾರಣದಿಂದ ಅಸಮಾನತೆ ನಿರ್ಮಾಣವಾಗಿದೆ . ಇದನ್ನು ಹೋಗಲಾಡಿಸಲು ಪ್ರಯತ್ನ ಮಾಡಬೇಕು ಸಿಎಂ ಕರೆ


!www.arambhsuddikannada.com

ಮಂಗಳೂರು, ಆರಂಭ ಸುದ್ದಿ ಕನ್ನಡ ಡಿಸೆಂಬರ್ 03-2025 ವೈಜ್ಞಾನಿಕ ಹಾಗೂ ವೈಚಾರಿಕ ಜ್ಞಾನವನ್ನು ಪಡೆಯಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಫೇಸ್ ಮತ್ತು ಎಐ ಉನ್ನತ ಅಧ್ಯಯನ ಕೇಂದ್ರದ ಶಿಲಾನ್ಯಾಸ ಫೇಸ್ ಟ್ರೈಡ್ ಪಾರ್ಕ್ ಮತ್ತು ಫೇಸ್ ಸ್ಪೋರ್ಟ್ಸ ಅರೇನಾ ಶಿಲಾನ್ಯಾಸ ಹಾಗೂ ಪೇಸ್ ಕೇರ್ಸ್ ಸಮುದಾಯ ಸೇವೆ ಯೋಜನೆಗಳನ್ನು ಉದ್ಘಾಟಿಸಿ ಮಾತನಾಡಿದರು.ಉತ್ತಮ ಕಲಿಕಾ ವಾತಾವರಣ ನೀಡಿರುವ ಪೇಸ್ ಶಿಕ್ಷಣ ಸಂಸ್ಥೆಪೇಸ್ ಗ್ರೂಪ್ನ ಸಂಸ್ಥಾಪಕರಾದ ಡಾ.ಪಿ.ಎ.ಇಬ್ರಾಹಿಂ ಅವರ ದೂರದೃಷ್ಟಿಯ ಫಲವಾಗಿ ಭಾರತ ಹಾಗೂ ವಿದೇಶಗಳಲ್ಲಿ ಅನೇಕ ಶೈಕ್ಷಣಿಕ ಸಂಸ್ಥೆಗಳು ಸ್ಥಾಪಿತವಾಗಿದ್ದು, ಸುಮಾರು 36,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ದೊಡ್ಡಪ್ರಮಾಣದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿರುವ ಪೇಸ್ ಸಂಸ್ಥೆ , ಉತ್ತಮ ಗುಣಮಟ್ಟದ ವಿದ್ಯಾಸಂಸ್ಥೆಯಾಗಿದೆ. ಉತ್ತಮ ಕಲಿಕಾ ವಾತಾವರಣವನ್ನು ನೀಡುವ ಶಿಕ್ಷಣಸಂಸ್ಥೆ ಯಾಗಿರುವುದು ಶ್ಲಾಘನೀಯ ಎಂದರು.ಮೂಢನಂಬಿಕೆಗಳಿರುವ ಸಮಾಜದ ಜೊತೆ ರಾಜಿಯಾಗಬೇಡಿ ವಿದ್ಯೆ ಪಡೆದ ನಂತರ ಸಮಾಜಕ್ಕೆ ನೀಡುವ ಕೊಡುಗೆ ಬಗ್ಗೆ ವಿದ್ಯಾರ್ಥಿಗಳು ಗಮನಹರಿಸಬೇಕು. ಆಧುನಿಕ ಶಿಕ್ಷಣದ ಜೊತೆಗೆ ವೈಜ್ಞಾನಿಕ ಹಾಗೂ ವೈಚಾರಿಕ ಜ್ಞಾನವನ್ನೂ ವಿದ್ಯಾರ್ಥಿಗಳು ಹೊಂದಿರಬೇಕು. ಆಗ ಮಾತ್ರ ಸಮಾಜದ ಸಮಸ್ಯೆಗಳಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಲು ಸಾಧ್ಯ. ಮೂಢನಂಬಿಕೆಗಳಿರುವ ಸಮಾಜದ ಜೊತೆ ರಾಜಿಯಾಗಲೀ , ಅಂಧಶ್ರದ್ಧೆಯ ಪಾಲನೆಯಾಗಲಿ ಮಾಡಬಾರದು ಎಂದರು.ಕೃತಕ ಬುದ್ಧಿಮತ್ತೆ ಕಲಿತು ಹಣೆಬರಹ ಅಂದರೆ ಅದು ವಿದ್ಯೆಯೇ ಅಲ್ಲಕೃತಕ ಬುದ್ಧಿಮತ್ತೆ ಕಲಿತು ಹಣೆಬರಹ ಅಂದರೆ ಅದು ವಿದ್ಯೆಯೇ ಅಲ್ಲ. ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವಂತ ವಿದ್ಯೆ ಅಗತ್ಯವಿದೆ. ಸಮಾಜದಲ್ಲಿ ಅನೇಕ ಧರ್ಮ ಜಾತಿಗಳಿವೆ. ವೈವಿಧ್ಯತೆಯಲ್ಲಿ ಏಕತೆಯನ್ನು ಸಾಧಿಸಬೇಕು ಎಂದು ಜನರಿಗೆ ಹೇಳುತ್ತೇವೆ. ವೈವಿಧ್ಯತೆಯಲ್ಲಿ ಏಕತೆ ಇಲ್ಲದೇ ಹೋದರೆ ಪ್ರಯೋಜನವಿಲ್ಲ. ವೈಚಾರಿಕತೆ, ವೈಜ್ಞಾನಿಕತೆ ಇರುವ ಹಾಗೂ ಜಾತಿ ವ್ಯವಸ್ಥೆಗೆ ಪರಿಹಾರ ರೂಪದಲ್ಲಿರುವ ವಿದ್ಯೆ ಬೇಕಿದೆ ಎಂದರು. 

ಸ್ವಾತಂತ್ರ್ಯಬಂದು 79 ವರ್ಷ ಹಾಗೂ ಸಂವಿಧಾನ ಜಾರಿಗೆ ಬಂದು 75 ವರ್ಷಗಳಾದರೂ ವೈಚಾರಿಕತೆ ಮತ್ತು ವೈಜ್ಞಾನಿಕತೆ ಬರದೇ ಹೋದರೆ ಪ್ರಯೋಜನ ಏನು ಎಂದರು ವೈಚಾರಿಕತೆ ವೈಜ್ಞಾನಿಕತೆಯನ್ನು ಮೈಗೂಡಿಸಿಕೊಳ್ಳಬೇಕು

ಸಮಾಜದಲ್ಲಿ ಅಸಮಾನತೆ ಇರುವುದು ಬಹುಸಂಖ್ಯಾತ ಜನರು ಶಿಕ್ಷಣದಿಂದ ವಂಚಿತರಾದರು ಎಂಬ ಕಾರಣದಿಂದ ಅಸಮಾನತೆ ನಿರ್ಮಾಣವಾಗಿದೆ . ಇದನ್ನು ಹೋಗಲಾಡಿಸಲು ಪ್ರಯತ್ನ ಮಾಡಬೇಕು. ಸ್ವಾತಂತ್ರ್ಯ ಯಶಸ್ವಿಯಾಗಲು ಅಸಮಾನತೆ ಸಮಾಜದಿಂದ ತೊಲಗಬೇಕು ಎಂದರು. ಸ್ವಾತಂತ್ರ್ಯ, ಸಮಾನತೆ, ಭಾತೃತ್ವವನ್ನು ನಮ್ಮ ಸಂವಿಧಾನ ಸಾರುತ್ತದೆ. ನಾವು ಏನೇ ಕಲಿತರೂ ವೈಚಾರಿಕತೆ ವೈಜ್ಞಾನಿಕತೆಯನ್ನು ಮೈಗೂಡಿಸಿಕೊಳ್ಳಬೇಕು . ಪ್ರತಿಯೊಬ್ಬರೂ ಮೊದಲು ಮಾನವನಾಗಬೇಕು ಎಂದರು. ಪರಸ್ಪರ ಪ್ರೀತಿಸಬೇಕೆಂಬ ಮನೋಭಾವ ವಿದ್ಯಾರ್ಥಿಗಳಲ್ಲಿ ಬೆಳೆದರೆ ನಮ್ಮ ಸಮಾಜದಲ್ಲಿ ಅಸಮಾನತೆ ತೊಲಗಿಸುವುದು ಸುಲಭ*

ಯಾವ ಧರ್ಮವೂ ಇನ್ನೊಬ್ಬರನ್ನು ದ್ವೇಷಿಸಿ ಎನ್ನುವುದಿಲ್ಲ. ಪರಸ್ಪರ ಪ್ರೀತಿಸಬೇಕೆಂಬ ಮನೋಭಾವ ವಿದ್ಯಾರ್ಥಿಗಳಲ್ಲಿ ಬೆಳೆದರೆ ನಮ್ಮ ಸಮಾಜದಲ್ಲಿ ಅಸಮಾನತೆ ತೊಲಗಿಸುವುದು ಸುಲಭ. ಎಲ್ಲರೂ ಮುಖ್ಯವಾಹಿನಿಗೆ ಬಂದಾಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದರು. ಸಮಸಮಾಜ ನಿರ್ಮಾಣ ನಮ್ಮ ಮುಂದಿನ ಗುರಿ

ಸಮಸಮಾಜ ನಿರ್ಮಾಣ ನಮ್ಮ ಮುಂದಿನ ಗುರಿ. ಪೇಸ್ ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ. ಇಬ್ರಾಹಿಂ ಅವರ ಕನಸನ್ನು ನನಸು ಮಾಡುವ ಕೆಲಸ ಸಂಸ್ಥೆಯಿಂದ ಆಗಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದರು.

Author

Arambh Suddi Kannada News True Newses And Stories Telecasting

Experienced journalist focused on global news, trends, and untold stories — with a commitment to accuracy and impact.

0/Post a Comment/Comments