ಬೆಂಗಳೂರು ಗೌರವದ ವಿಚಾರ ಚಿನ್ನಸ್ವಾಮಿಯಿಂದ IPL ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ Deputy ಸಿಎಂDk ಶಿವಕುಮಾರ್!!!!
𝘄𝘄𝘄. 𝗔𝗿𝗮𝗺𝗯𝗵𝘀𝘂𝗱𝗱𝗶𝗸𝗮𝗻𝗻𝗮𝗱𝗮. 𝗰𝗼𝗺
ಬೆಂಗಳೂರು ಆರಂಭ ಸುದ್ದಿ ಕನ್ನಡ ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್(IPL) ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ. ಪಂದ್ಯಗಳು ಇಲ್ಲೇ ನಡೆಸುವಂತೆ ಮಾಡುತ್ತೇವೆ" ಎಂದು ಡಿಸಿಎಂ DK ಶಿವಕುಮಾರ್ ತಿಳಿಸಿದರು.ಕೆಎಸ್ಸಿಎ ಚುನಾವಣೆಯಲ್ಲಿ ಮತದಾನ ಮಾಡಿದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. ಆರ್ಸಿಬಿ ಸಂಭ್ರಮಾಚರಣೆ ವೇಳೆ ನಡೆದ ದುರ್ಘಟನೆ ಬಳಿಕ ಐಪಿಎಲ್ ಸೇರಿದಂತೆ ಪ್ರಮುಖ ಪಂದ್ಯಗಳು ಈ ಕ್ರೀಡಾಂಗಣದಿಂದ ಸ್ಥಳಾಂತರವಾಗಿರುವ ಬಗ್ಗೆ ಕೇಳಿದಾಗ, "ಇದು ಕರ್ನಾಟಕ ರಾಜ್ಯ ಹಾಗೂ ಬೆಂಗಳೂರಿನ ಗೌರವದ ವಿಚಾರ.ಮುಂದಿನ ಐಪಿಎಲ್ ಪಂದ್ಯಗಳನ್ನು ಇಲ್ಲೇ ನಡೆಸುವಂತೆ ಕ್ರಮ ಕೈಗೊಳ್ಳುತ್ತೇವೆ" ಎಂದು ತಿಳಿಸಿದರು.www.arambhsuddikannada.com

Post a Comment